ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ 2025 -26 ನೇ ಸಾಲಿನ ವಿವಿಧ ಶೈಕ್ಷಣಿಕ ಸಮಿತಿಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ವಿದ್ಯಾರ್ಥಿಗಳು ಕಾಲೇಜಿನ ವಿವಿಧ ಸಮಿತಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಮುಖಾಂತರ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಿಕೊಳ್ಳಬಹುದು ಹಾಗೂ ತಮ್ಮ ವ್ಯಕ್ತಿತ್ವ ವಿಕಸನ ಶೈಕ್ಷಣಿಕ ಸಮಿತಿಗಳ ಮೂಲಕ ಸಾಧ್ಯ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿಸ್ವಸ್ಥ ಮಂಡಳಿಯ ಸದಸ್ಯರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ವಹಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಚಂದ್ರಾವತಿ ಶೆಟ್ಟಿ ಉಪಸ್ಥಿತರಿದ್ದರು. ಶೈಕ್ಷಣಿಕ ಸಮಿತಿಯ ಸಂಯೋಜಕರು ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ| ರವಿಚಂದ್ರ ಅತಿಥಿಗಳನ್ನು ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕುಮಾರ್ ಪಿ ಪರಿಚಯಿಸಿದರು. ಕಾರ್ಯಕ್ರಮವನ್ನು ಆಂಗ್ಲ ಭಾಷೆ ಉಪನ್ಯಾಸಕಿ ಶ್ರೀಮತಿ ಶ್ವೇತ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಸೂರಜ್ ಕುಮಾರ್ ಶೆಟ್ಟಿ ವಂದಿಸಿದರು ಹಾಗೂ ವಿದ್ಯಾರ್ಥಿನಿ ಕುಮಾರಿ ಸೌಮ್ಯ ಎಸ್ ಪ್ರಾರ್ಥಿಸಿದರು.