ಬಂಟರ ಯಾನೆ ನಾಡವರ ಸಂಘ ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಶ್ರೀ ಮಹಾಲಿಂಗೇಶ್ವರ ಕನ್ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕ, ಉದ್ಯಮಿ ಗಾಯಾಡಿ ಗೋಕುಲ ಶೆಟ್ಟಿ ಉಪ್ಪುಂದ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಚಿತ್ತೂರು ಮಂಜಯ್ಯ ಶೆಟ್ಟಿ, ಉಪಾಧ್ಯಕ್ಷರಾಗಿ ಬಿ ಸದಾಶಿವ ಶೆಟ್ಟಿ, ನೆಲ್ಯಾಡಿ ಕರುಣಾಕರ ಶೆಟ್ಟಿ, ಕುದ್ರುಕೊಡು ಜಗದೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ನಿತಿನ್ ಬಿ ಶೆಟ್ಟಿ, ಕೋಶಾಧಿಕಾರಿಯಾಗಿ ಜಯರಾಮ ಶೆಟ್ಟಿ ಬಿಜೂರು, ಸಂಘಟನಾ ಕಾರ್ಯದರ್ಶಿಗಳಾಗಿ ಉದಯ ಕುಮಾರ ಅಡಿಕೆಕೊಡ್ಲು, ಸಂತೋಷ್ ಶೆಟ್ಟಿ ಬೈಂದೂರು, ಜೊತೆ ಕಾರ್ಯದರ್ಶಿಯಾಗಿ ಮನೋಹರ್ ಶೆಟ್ಟಿ ಉಪ್ಪುಂದ, ಜಯರಾಮ ಶೆಟ್ಟಿ ಗಂಟಿಹೊಳೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ನೂತನ ಅಧ್ಯಕ್ಷರನ್ನು ಅಭಿನಂದಿಸಿದ್ದಾರೆ.
