ಮಂದಾರ್ತಿ ಸೇವಾ ಸಹಕಾರಿ ಸಂಘವು 2024 -25 ನೇ ಸಾಲಿನಲ್ಲಿ ನಡೆಸಿದ ಅತ್ಯುತ್ತಮ ಸಾಧನೆಗಾಗಿ ಮೂರನೇ ಬಾರಿ ಅಪೆಕ್ಸ್ ಬ್ಯಾಂಕಿನ ಪ್ರಶಸ್ತಿಗೆ ಭಾಜನವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್ ಗಂಗಾಧರ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಮಾಜಿ ನಿರ್ದೇಶಕ ಎಚ್ ವಿಠಲ ಶೆಟ್ಟಿ, ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ಶೆಟ್ಟಿ ಬಾಲ್ಯೊಟ್ಟು, ದಿವಾಕರ ರೈ ವಿನಯಕುಮಾರ್ ಸೂರಿಂಜೆ, ಮಹೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಮಂಗಳೂರು ಡಿಆರ್ ರಮೇಶ್, ಉಡುಪಿ ಡಿಆರ್ ಲಾವಣ್ಯ ಉಪಸ್ಥಿತರಿದ್ದರು.