ಬ್ರಹ್ಮಾವರ ಸಂಸ್ಥೆ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮಹತ್ವಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಯುತ ಜಾರ್ಜ್ ಕುರಿಯನ್ ರವರು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿ, ವಿದ್ಯಾರ್ಥಿಗಳಿಗೆ ಎಲ್ಲಕ್ಕಿಂತ ಶ್ರೇಷ್ಠವಾದ ಪದ, ವೃತ್ತಿ, ಸನ್ಮಾರ್ಗವನ್ನು ತೋರಿಸುವವನು “ಗುರು” ಎಂದು. ಗುರು ಎಂಬ ಪದದ ಮಹತ್ವವನ್ನು ತಿಳಿಸಿದರು. ಶಿಕ್ಷಕರಿಗೆ ಬೋಧನೆಯಲ್ಲಿ ಹೊಸ ಹೊಸ ಬೋಧನಾ ವಿಧಾನ, ಕೌಶಲ ಮತ್ತು ಜ್ಞಾನವನ್ನು ಅಳವಡಿಸಿಕೊಳ್ಳುವಂತೆ ಸಲಹೆಯನ್ನು ನೀಡಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಪ್ರಕಾಶ್ಚಂದ್ರ ಶೆಟ್ಟಿಯವರು ಶಿಕ್ಷಕರಿಂದ ಪ್ರತಿಜ್ಞೆಯನ್ನು ಸ್ವೀಕರಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದೆ ಗುರುಯಿರಬೇಕು, ಹಿಂದೆ ಗುರಿಯಿರಬೇಕು. ನಮ್ಮ ಸಂಸ್ಥೆಯು ಉತ್ತಮ ಶಿಕ್ಷಕ ವೃಂದದವರನ್ನು ಹೊಂದಿದ್ದು, ಅವರ ಮಾರ್ಗದರ್ಶನದಲ್ಲಿ ಕಲಿಯುವ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆಯೆಂದು ಶುಭ ಹಾರೈಸಿದರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಶುಭಾಶಯ ಪತ್ರಗಳ ಮತ್ತು ಗಾಯನದ ಮೂಲಕ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿದರು.
ಶಿಕ್ಷಕ ವೃಂದದವರು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಶಿಕ್ಷಕರಲ್ಲಿರುವ ಸೇವಾ ಮನೋಭಾವವನ್ನು ಗುರುತಿಸಿ ಸ್ಮರಣಿಕೆಯನ್ನು ನೀಡಲಾಯಿತು. ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದೊಂದಿಗೆ “ಓಣಂ” ಹಬ್ಬವನ್ನು ಹೂವಿನ ರಂಗೋಲಿ ಹಾಕಿ, ದೀಪ ಬೆಳಗಿ, ಓಣಂ ಗೀತೆಯನ್ನು ಹಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯೆಯಾದ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶಿಕ್ಷಕರು, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.