ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ 2024- 25 ನೇ ಸಾಲಿನಲ್ಲಿ ಲೆಕ್ಕಪರಿಶೋಧನೆ ‘ಅ’ ವರ್ಗದ ಸಹಕಾರ ಸಂಘಗಳಲ್ಲಿ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪ್ರಥಮ ಪ್ರಶಸ್ತಿಯನ್ನು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಪಡೆಯಿತು. ಡಾ| ಎಂ ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತಿ ಕುಮಾರ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಹರೀಶ್ ಕಿಣಿ ಬಿ, ನಿರ್ದೇಶಕರಾದ ಕೃಷ್ಣ ನಾಯ್ಕ್, ಸದಸ್ಯರಾದ ಅಚ್ಯುತ್ ಶೆಟ್ಟಿ ಉಪಸ್ಥಿತರಿದ್ದರು.