ಬಂಟರ ಸಂಘ ಬಂಟ್ವಾಳ ತಾಲೂಕು ಯುವ ವಿಭಾಗದ 2025 -28 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ನೂತನ ಯುವ ವಿಭಾಗದ ಅಧ್ಯಕ್ಷರಾಗಿ ಗೋಕುಲ್ ಭಂಡಾರಿ ಸಜೀಪ, ಉಪಾಧ್ಯಕ್ಷರಾಗಿ ರಂಜಿತ್ ಶೆಟ್ಟಿ ಗುಭ್ಯ, ಕಾರ್ಯದರ್ಶಿಯಾಗಿ ಸುನಾದ್ ರಾಜ್ ಶೆಟ್ಟಿ ಬೊಂಡಾಲ, ಕೋಶಾಧಿಕಾರಿಯಾಗಿ ರತನ್ ರೈ ಸರಪಾಡಿ, ಜೊತೆ ಕಾರ್ಯದರ್ಶಿಯಾಗಿ ಕುಮಾರಿ ಸುವೀಕ್ಷ ಭಂಡಾರಿ ಮುಡಿಪು ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಯುವ ವಿಭಾಗದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಬಂಟರ ಸಂಘ ಬಂಟ್ವಾಳ ತಾಲೂಕಿನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರ್ವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.