ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನವರು ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ ಅವರನ್ನು ಲಯನ್ಸ್ ಕ್ಲಬ್ ನ ಹಿರಿಯ ಸದಸ್ಯರು, ನಿವೃತ್ತ ಬ್ಯಾಂಕ್ ಉದ್ಯೋಗಿ ಹಳ್ನಾಡು ಬಿ. ಜಯರಾಮ ಶೆಟ್ಟಿ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಲಯಾಧ್ಯಕ್ಷರಾದ ಲ. ವಸಂತರಾಜ ಶೆಟ್ಟಿ, ಸ್ಥಾಪಕ ಅಧ್ಯಕ್ಷ ಅಶೋಕ ಶೆಟ್ಟಿ ಸಂಸಾಡಿ, ಹೈದರಾಬಾದ್ ಹೋಟೆಲ್ ಉದ್ಯಮಿ ನೆಲಗೊಂಡ ಸುಧಾಕರ ಶೆಟ್ಟಿ ಜನ್ಸಾಲೆ, ಬೈಂದೂರು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಶಶಿಧರ ಶೆಟ್ಟಿ ಸಾಲ್ಗದ್ದೆ, ಪಶು ವೈದ್ಯ ಡಾ. ಪ್ರಶಾಂತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದರು.

ನಿಕಟ ಪೂರ್ವ ಅಧ್ಯಕ್ಷ ಲ| ಉದಯ್ ಶೆಟ್ಟಿ ಮಚ್ಚಟ್ಟು, ಲ| ಪ್ರಕಾಶ ಶೆಟ್ಟಿ ಚೋರ್ಮಕ್ಕಿ, ಲ| ಗಣೇಶ್ ಬೈಂದೂರು, ಲ| ಪ್ರತಿಷ್ ಶೆಟ್ಟಿ ಕೊಕ್ಕರ್ಣೆ, ಲ| ವಿಕ್ರಂ ಶೆಟ್ಟಿ ಕುಂದಾಪುರ, ಲ| ಪ್ರಭಾಕರ ಶೆಟ್ಟಿ ಬೆಳ್ವೆ, ಲ| ಪ್ರಶಾಂತ್ ಶೆಟ್ಟಿ ಶಿರೂರು, ಲ| ರಾಜೀವ ಶೆಟ್ಟಿ ಹೆಂಗವಳ್ಳಿ, ಲ| ಸುಕುಮಾರ ಶೆಟ್ಟಿ ಹೇರಿಕುದ್ರು, ಲ| ಅರುಣ್ ಕುಮಾರ್ ಶೆಟ್ಟಿ ಕುಂದಾಪುರ, ಲ| ಸತೀಶ್ ಶೆಟ್ಟಿ ಹೆಸ್ಕತ್ತೂರು, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಮಾಜಿ ಅಧ್ಯಕ್ಷ ಲ| ಸತೀಶ್ ಶೆಟ್ಟಿ ಕಂದಾವರ ಪ್ರಸ್ತಾವಿಕ ಮಾತುಗಳಾಡಿದರು. ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಉಪ ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ನಿರೂಪಿಸಿ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಪ್ರಧಾನ ಕಾರ್ಯದರ್ಶಿ ನಿವೃತ್ತ ಪ್ರಾಂಶುಪಾಲ ಲ| ಭುಜಂಗ ಶೆಟ್ಟಿ ರಟ್ಟಾಡಿ ವಂದಿಸಿದರು.