
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಗಾಗಿ ಸುದ್ದಿ ಬಿಡುಗಡೆ ದಿನಪತ್ರಿಕೆಯ ಹಿರಿಯ ವರದಿಗಾರ ಉಮಾಪ್ರಸಾದ್ ರೈ ನಡುಬೈಲುರವರನ್ನು ಸಮರ್ಥ ಜನಸೇವಾ ಟ್ರಸ್ಟ್ ಪುಣ್ಚಪಾಡಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಉಮಾಪ್ರಸಾದ್ ರೈ ನಡುಬೈಲುರವರು 1993 ರಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರಿನ ಸುದ್ದಿ ಬಿಡುಗಡೆ ದಿನಪತ್ರಿಕೆಯಲ್ಲಿ 20 ವರ್ಷಗಳಿಂದ ವರದಿಗಾರರಾಗಿದ್ದು, ಪತ್ರಿಕಾ ಕ್ಷೇತ್ರದಲ್ಲಿ 32 ವರ್ಷಗಳ ಅನುಭವವನ್ನು ಹೊಂದಿದ್ದಾರೆ.


ಸಮರ್ಥ ಜನ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಿರಿಶಂಕರ ಸುಲಾಯರವರು ಅಧ್ಯಕ್ಷತೆ ವಹಿಸಿದ್ದರು. ಜೊತೆ ಕಾರ್ಯದರ್ಶಿ ನಾಗರಾಜ ನಿಡ್ವಣ್ಣಾಯ, ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಟ್ರಸ್ಟಿಗಳಾದ ನಾಗೇಶ್ ಓಡಂತರ್ಯ, ರಾಜೇಶ್ವರಿ ಕನ್ಯಾಮಂಗಳ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಶ್ರೀ ಕುಚ್ಚೆಜಾಲು, ಯಶೋದ ನೂಜಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.





























































































































