ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಧ್ಯ ಇಲ್ಲಿಗೆ ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್ ಅವರ ಶಿಫಾರಸ್ಸಿನ ಮೇರೆಗೆ ನೂತನವಾಗಿ ಪ್ರೌಢಶಾಲೆ ಮಂಜೂರಾಗಿದ್ದು, ಆ ಪ್ರಯುಕ್ತ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಮಧ್ಯ ಶಾಲೆಯ ವತಿಯಿಂದ ಸ್ಪೀಕರ್ ಅವರನ್ನು ಮಂಗಳೂರು ಕಚೇರಿಯಲ್ಲಿ ಅಭಿನಂದಿಸಲಾಯಿತು. ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಮಧ್ಯ, ಖ್ಯಾತ ಉದ್ಯಮಿಗಳಾದ ಶಿವಪ್ರಸಾದ್ ಶೆಟ್ಟಿ, ರಂಜನ್ ಚೌಟ ಮಧ್ಯ ಉಪಸ್ಥಿತರಿದ್ದರು.
