ಮೂಡಬಿದಿರೆ ಆಳ್ಚಾಸ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ, ಕಟ್ಲ ದಾಮೋದರ ಶೆಟ್ಟಿ ಮತ್ತು ಸುಶೀಲಾ ಶೆಟ್ಟಿ ದಂಪತಿಯ ಪುತ್ರಿಯಾದ ಸುಧಾರಾಣಿ ಶೆಟ್ಟಿ ಅವರ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿ.ವಿ ಎಸ್.ವಿ.ಪಿ. ಅಧ್ಯಯನ ಸಂಸ್ಥೆಯ ಸಹ ಪ್ರಾಧ್ಯಾಪಕ ಹಾಗೂ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕ ಡಾ. ನಾಗಪ್ಪ ಗೌಡ ಅವರ ಮಾರ್ಗದರ್ಶನದಲ್ಲಿ ಇವರು ತುಳು ಅನುವಾದ ವಾಙ್ಮಯ ಸಾಂಸ್ಕೃತಿಕ ಅನುಸಂಧಾನದ ನೆಲೆಗಳು ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದರು. ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಹಳೇ ವಿದ್ಯಾರ್ಥಿಯಾದ ಸುಧಾರಾಣಿ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.