ಶ್ರಮಯೇವ ಜಯತೆ ಎನ್ನುವ ಧ್ಯೇಯದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ. ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ ಸಾಧನಾ ಪಥದಲ್ಲಿ ಸಾಗುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುತ್ತಿದೆ. ಎಂದು ಕರ್ನಾಟಕ ಸರಕಾರ (ಎನ್.ಎಸ್.ಎಸ್ ಕೋಶ)ದ ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ. ಗಣನಾಥ ಎಕ್ಕಾರ್ ಅಭಿಪ್ರಾಯಪಟ್ಟಿದ್ದಾರೆ. ಅವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಹೊಸ ಘಟಕ ಉದ್ಘಾಟಿಸಿ ಮಾತನಾಡಿದರು. ಎನ್.ಎಸ್.ಎಸ್. ಇತಿಹಾಸ ಹಾಗೂ ಪ್ರಸಕ್ತ ಸಾಧನೆಗಳ ವಿವರಣೆ ನೀಡಿ ಮಣಿಪಾಲ ಜ್ಞಾನಸುಧಾ ಹೊಸ ಎನ್.ಎಸ್.ಎಸ್. ಘಟಕಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ವಿಭಾಗದ ಎನ್.ಎಸ್.ಎಸ್. ವಿಭಾಗಾಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿನಿ ಎನ್.ಎಸ್.ಎಸ್. ರಾಜ್ಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ ಸಮಿಯ ಹೆಗ್ಡೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಹೊಸ ಎನ್.ಎಸ್. ಎಸ್. ಘಟಕಕ್ಕೆ ಶುಭ ಹಾರೈಸಿ, ವಿದ್ಯಾರ್ಥಿಗಳು ಸಮಾಜದ ಕೊಡುಗೆಗಳಾಗಿ ಮೂಡಿ ಬರಬೇಕು ಎಂದರು. ಎನ್.ಎಸ್.ಎಸ್. ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಜೆಕಾರು ಪದ್ಮಾಗೋಪಾಲ್ ಎಜುಕೇಶನ್ ಟ್ರಸ್ಟ್(ರಿ)ನ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಬಂಡಿ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂತೋಷ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಶೆಟ್ಟಿ, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ಸಂಪ್ರೀತ್ ಹಾಗೂ ಸಿಂಚನ ವೇದಿಕೆಯಲ್ಲಿದ್ದರು. ಉಪಪ್ರಾಂಶುಪಾಲರಾದ ಹೇಮಂತ್, ಉಪನ್ಯಾಸಕ ಬಳಗ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ರವಿ ಜಿ ಸ್ವಾಗತಿಸಿ ಪ್ರಸ್ತಾವಿಕ ಮಾತನಾಡಿದರು. ಆಂಗ್ಲ ಭಾಷೆ ಉಪನ್ಯಾಸಕಿ ಶಮಿತಾ ನಿರೂಪಿಸಿ ವಂದಿಸಿದರು.





































































































