ಬಂಟರ ಸಂಘ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಗುತ್ತಿನಾರ್ ರವೀಂದ್ರ ಶೆಟ್ಟಿ ಕೊಟ್ರಪಾಡಿಯವರ ನೇತೃತ್ವದಲ್ಲಿ ಹಾಗೂ ಯುವ ವಿಭಾಗದ ಕಾರ್ಯಾಧ್ಯಕ್ಷ ವೃಷಭ್ ಶೆಟ್ಟಿಯವರ ಮುಂದಾಳತ್ವದಲ್ಲಿ ದಾಂಡಿಯಾ ರಾಸ್ ಹಾಗೂ ಗರ್ಬಾ ನೈಟ್ ಮತ್ತು ವಿವಿಧ ರೀತಿಯ ಕಾರ್ಯಕ್ರಮಗಳು ಇದೇ ಬರುವ ಅಕ್ಟೋಬರ್ 2 ರ ಗುರುವಾರದಂದು ಸಂಜೆ 7 ಗಂಟೆಯಿಂದ ಭಯಂದರ್ ಗೊಲ್ಡನ್ ನೆಸ್ಟ್ ಸರ್ಕಲ್ ಸಮೀಪದ ದಿ ಕ್ರೌನ್ ಬ್ಯುಸಿನೆಸ್ ಹೊಟೇಲ್ ಇಲ್ಲಿ ನಡೆಯಲಿದೆ. ಪ್ರಾದೇಶಿಕ ಸಮಿತಿಯ ಯುವ ವಿಭಾಗದ ವತಿಯಿಂದ ಅದ್ದೂರಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ 7 ವರ್ಷ ಕೆಳಗಿನ ವಯೋಮಿತಿಯ ಪುಟಾಣಿಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು. ದಾಂಡಿಯಾ ರಾಸ್ ಹಾಗೂ ಗರ್ಬಾ ನೈಟ್ ನಲ್ಲಿ ಭಾಗವಹಿಸುವ ಪುರುಷ ಹಾಗೂ ಮಹಿಳೆಯರಿಗೆ ರಮಣೀಯವಾಗಿ ಧರಿಸುವ ಬಟ್ಟೆಗಳ ಆಧಾರದ ಮೇಲೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಮತ್ತು ಪುರುಷ ಹಾಗೂ ಮಹಿಳಾ ವಿಭಾಗದ ನೃತ್ಯಗಾರರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಪ್ರಾಶಸ್ತ್ಯದ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಗುವುದು.

ಈ ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರು ವಹಿಸಲಿದ್ದು, ಸಮಾರಂಭದ ಮುಖ್ಯ ಅತಿಥಿಯಾಗಿ ಇಸ್ಸಾರ್ ಸರ್ವಿಸಸ್ ಪ್ರೈ.ಲಿ. ಇದರ ಸಿಎಂಡಿ ಡಾ| ಆರ್. ಕೆ ಶೆಟ್ಟಿಯವರು ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಇದರ ಜತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್ ಮತ್ತು ಯುವ ವಿಭಾಗದ ಮಾಜಿ ಕಾರ್ಯಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾಣಿಗುತ್ತು, ಬಂಟರ ಸಂಘ ಮುಂಬಯಿ ಇದರ ಪಶ್ಚಿಮ ವಿಭಾಗದ ಸಮನ್ವಯಕ ಖಾಂದೇಶ್ ಭಾಸ್ಕರ ಶೆಟ್ಟಿ, ಬಂಟರ ಸಂಘ ಮುಂಬಯಿಯ ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ ಶೆಟ್ಟಿ, ಬಂಟರ ಸಂಘ ಮುಂಬಯಿ ಇದರ ಮೀರಾ ಭಯಂದರ್ ವಲಯದ ಮಹಿಳಾ ಕಾರ್ಯಾಧ್ಯಕ್ಷೆ ವಸಂತಿ ಶಿವ ಶೆಟ್ಟಿ ಉಪಸ್ಥಿತಲಿರುವರು.
ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ, ಗೌ. ಕಾರ್ಯದರ್ಶಿ ಡಾ| ಆರ್ ಕೆ ಶೆಟ್ಟಿ, ಗೌ. ಕೋಶಾಧಿಕಾರಿ ಸಿ.ಎ ರಮೇಶ್ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಗಿರೀಶ್ ಆರ್. ಶೆಟ್ಟಿ ತೆಳ್ಳಾರ್, ಜತೆ ಕೋಶಾಧಿಕಾರಿ ಶಶಿಧರ್ ಶೆಟ್ಟಿ ಇನ್ನಂಜೆ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಆರ್. ಶೆಟ್ಟಿ ಹಾಗೂ ಉಪ ಸಮಿತಿ ಮತ್ತು ಸರ್ವ ಪದಾಧಿಕಾರಿಗಳು, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಸಂಚಾಲಕ ಮಾಣಿಗುತ್ತು ಶಿವಪ್ರಸಾದ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷರಾದ ಅರವಿಂದ್ ಆನಂದ್ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಖಜಾಂಚಿ ಶಂಕರ್ ಕೆ. ಶೆಟ್ಟಿ, ಜತೆ ಕಾರ್ಯದರ್ಶಿ ರಮೇಶ್ ಎಂ. ಶೆಟ್ಟಿ ಸಿಧ್ದಕಟ್ಟೆ, ಜತೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ, ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಸುಜಾತ ಶೆಟ್ಟಿ, ಕಾರ್ಯದರ್ಶಿ ಸುಮಂಗಲಾ ಕಣಂಜಾರ್, ಕೋಶಾಧಿಕಾರಿ ವಂದನಾ ಶೆಟ್ಟಿ, ಜತೆ ಕಾರ್ಯದರ್ಶಿ ಶಿಲ್ಪಾ ಶೆಟ್ಟಿ, ಜತೆ ಕೋಶಾಧಿಕಾರಿ ಅಶ್ವಿನಿ ಶೆಟ್ಟಿ ಹಾಗೂ ಸರ್ವ ಆಡಳಿತ ಸಮಿತಿಯ ಪದಾಧಿಕಾರಿಗಳು ಮಹಿಳಾ ವಿಭಾಗ, ಯುವ ವಿಭಾಗದ ಉಪ ಕಾರ್ಯಾಧ್ಯಕ್ಷ ಸುಶಾಂತ್ ಶೆಟ್ಟಿ, ಕಾರ್ಯದರ್ಶಿ ನಿರೀಕ್ಷಾ ಶೆಟ್ಟಿ, ಕೊಶಾಧಿಕಾರಿ ವಿನಾಯಕ್ ಶೆಟ್ಟಿ, ಜತೆ ಕಾರ್ಯದರ್ಶಿ ಅನುಷಾ ಶೆಟ್ಟಿ, ಉಪ ಕೋಶಾಧಿಕಾರಿ ತತ್ವಜ್ನ ಶೆಟ್ಟಿ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದ್ದಾರೆ.
ಚಿತ್ರ, ವರದಿ : ವೈ ಟಿ ಶೆಟ್ಟಿ ಹೆಜಮಾಡಿ