ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗಿದ ಸೌಹಾರ್ದ ಸಹಕಾರಿಗಳ ರಜತ ಮಹೋತ್ಸವ ಸಮಾವೇಶ ಸಂದರ್ಭದಲ್ಲಿ ಸಹಕಾರ ರತ್ನ ಪುರಸ್ಕೃತ ಆರ್ಬಿಐನ ಮಾಜಿ ನಿರ್ದೇಶಕರೂ ಆಗಿರುವ ಪುತ್ತೂರಿನ ಡಾ| ಅಗರಿ ನವೀನ್ ಭಂಡಾರಿಯವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಅನೇಕ ಗಣ್ಯರು ಹಾಗೂ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮಾವೇಶದಲ್ಲಿ ಉಪಸ್ಥಿತರಿದ್ದರು.
ಚಿತ್ರ, ವರದಿ : ಉಮಾಪ್ರಸಾದ್ ರೈ