ಮೀರಾ ದಹಾಣು ಬಂಟರ ಸಂಘದ ಮಾಜಿ ಅಧ್ಯಕ್ಷ, ಹೋಟೆಲ್ ಉದ್ಯಮಿ, ವಸಾಯಿ ಕರ್ನಾಟಕ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಸಮಾಜಸೇವಕ ಪುನರೂರು ಭಾಸ್ಕರ್ ಶೆಟ್ಟಿಯವರು ನಿಧನರಾಗಿದ್ದಾರೆ. ಜನಪರ ಕೆಲಸಗಳಲ್ಲಿ ಮುಂಚೂಣಿಯಲ್ಲಿದ್ದ ಭಾಸ್ಕರ್ ಶೆಟ್ಟಿಯವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮೀರಾ ದಹಾಣು ಬಂಟರ ಸಂಘದ ಸ್ಥಾಪಕಾಧ್ಯಕ್ಷ ವಿರಾರ್ ಶಂಕರ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ, ಶಶಿಧರ್ ಶೆಟ್ಟಿ ವಸಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.