ಯುವ ಜನತೆ ಉದ್ಯೋಗಾಸಕ್ತಿಗಿಂತ ಹೆಚ್ಚು ಉದ್ಯಮಶೀಲತೆಯ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಸಾಮಾಜಿಕ ಜೀವನದ ಜೊತೆ ಜೊತೆಗೆ ಆರ್ಥಿಕ ಸ್ವಾವಲಂಬನೆಯ ಕಡೆಗೆ ಗಮನ ಹರಿಸಬೇಕು ಎಂದು ಮುಂಬೈ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಅಭಿಪ್ರಾಯ ಪಟ್ಟರು. ಅವರು ಅ. 27 ರಂದು ಕಾರ್ಕಳದ ಕಟೀಲ್ ಇಂಟರ್ನ್ಯಾಷನಲ್ ಹೋಟೆಲ್ ನಲ್ಲಿ ಶುಭಾರಂಭಗೊಂಡ ಕೌಟುಂಬಿಕ, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆಯ ಶಕ್ತಿ ಇವೆಂಟ್ಸ್ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಬೆಂಗಳೂರು ಮತ್ತು ಮಂಗಳೂರು ಭಾಗದಲ್ಲಿ ಹೆಚ್ಚಿನ ಇವೆಂಟ್ ಕಂಪನಿಗಳು ಕಾರ್ಯಾಚರಿಸುತ್ತಿದ್ದು, ಕಾರ್ಕಳದಲ್ಲಿ ಶಕ್ತಿ ಇವೆಂಟ್ಸ್ ಸಂಸ್ಥೆ ಆರಂಭವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಯಶಸ್ವಿಯಾಗಿ ಮುನ್ನಡೆಯಲ್ಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಬೋಳ ಶ್ರೀನಿವಾಸ್ ಕಾಮತ್, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು ಮತ್ತು ನಿತ್ಯಾನಂದ ಪೈ ಉಪಸ್ಥಿತರಿದ್ದರು. ಸಂಸ್ಥೆಯ ಪಾಲುದಾರರಾದ ಗುರುಪ್ರಸಾದ್ ನಾರಾವಿ, ಶ್ರೀಕಾಂತ್ ಶೆಟ್ಟಿ ಮತ್ತು ಸಂತೋಷ್ ಸ್ವಾಗತಿಸಿದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.





































































































