ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಯುವಜನತೆ ಪ್ರತಿಭಾವಂತರು. ಪ್ರತಿಭಾನ್ವಿತರಿಗೆ ಉದ್ಯೋಗ ಒದಗಿಸುವ ಜೊತೆಗೆ ಕೇಂದ್ರ, ರಾಜ್ಯ ಸರಕಾರವು ಕೌಶಲ ಅಭಿವೃದ್ಧಿಗೆ ಹೆಚ್ಚು ಆಸಕ್ತಿ ಹೊಂದಿದ್ದು, ಇವೆಲ್ಲವನ್ನೂ ಒಂದೇ ಸೂರಿನಡಿ ಅಶೋಕ್ ಕುಮಾರ್ ಶೆಟ್ಟಿ ನೇತೃತ್ವದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇದರ ಯೋಜನೆಯು ಸಮಾಜಕ್ಕೆ ಮಾರ್ಗದರ್ಶಕವಾಗಿದೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ ಆರ್ ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಮಣಿಪುರ ಕುಂತಳನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ನಾಲ್ಕನೇ ಬಾರಿ ನಡೆದ ಉಚಿತ ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂಎ ಗಫೂರ್ ಮಾತನಾಡಿ, ನಿರುದ್ಯೋಗವನ್ನು ಹೋಗಲಾಡಿಸುವ ಕೌಶಲ ಅಭಿವೃದ್ಧಿ ತರಬೇತಿಯೊಂದಿಗೆ ಉದ್ಯೋಗ ಮೇಳ ಆಯೋಜನೆ ಮೂಲಕ ಉದ್ಯೋಗವಕಾಶವನ್ನು ಯುವಜನತೆಗೆ ಒದಗಿಸುವ ಮೂಲಕ ಯುವ ಜನರಿಗೆ ಶಕ್ತಿ ಕೊಡುವ ಕೆಲಸ ಕಾರ್ಯದ ಮೂಲಕ ಸುಶಿಕ್ಷಿತ ಸಮಾಜ ನಿರ್ಮಾಣ ಕಾರ್ಯ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, 4 ನೇ ಬಾರಿ ನಡೆಸಿದ ಉದ್ಯೋಗ ಮೇಳದಲ್ಲಿ 2700 ಅಭ್ಯರ್ಥಿಗಳು ನೋಂದಾಯಿಸಿದ್ದು 1516 ಮಂದಿಗೆ ಉದ್ಯೋಗ ಲಭಿಸಿದೆ ಎಂದರು. ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕರಾದ ಕೆ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಇತರ ಗಣ್ಯರು ಮಾತನಾಡಿದರು.
ವೇದಿಕೆಯಲ್ಲಿ ಗಣ್ಯರಾದ ಕರುಣಾಕರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಉದಯಕುಮಾರ್ ಶೆಟ್ಟಿ ಮುನಿಯಾಲು, ಸುರೇಶ್ ಶೆಟ್ಟಿ, ನಾಗೇಶ್ ಹೆಗ್ಡೆ, ನ್ಯಾಯವಾದಿ ಶಾಂತರಾಮ ಶೆಟ್ಟಿ, ನವೀನ್ ಶೆಟ್ಟಿ ಕುತ್ಯಾರು, ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ರಮೇಶ್ ಕಾಂಚನ್, ಭಾಸ್ಕರ್ ಶೆಟ್ಟಿ ಮುಂಬೈ, ಸುಪ್ರಸಾದ್ ಶೆಟ್ಟಿ, ಶೋಧನ್ ಶೆಟ್ಟಿ ಬೆಳ್ಮಣ್, ಡಾ. ವೈ ಎನ್ ಶೆಟ್ಟಿ, ನ್ಯಾಯವಾದಿ ಉಮೇಶ್ ಶೆಟ್ಟಿ, ಸಂತೋಷ್ ಶೆಟ್ಟಿ ಪಲ್ಲವಿ, ಡಾ. ಪ್ರಶಾಂತ್ ಶೆಟ್ಟಿ ಕಾಪು, ಸುಧಾಕರ ಶೆಟ್ಟಿ ಕಾಪು, ಡಾ| ದಿವ್ಯರಾಣಿ ಪ್ರದೀಪ್, ಬಂಟರ ಸಂಘದ ಅಧ್ಯಕ್ಷ ಡಾ. ಎಚ್ ಬಿ ಶೆಟ್ಟಿ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಕೋಶಾಧಿಕಾರಿ ವಿಜಿತ್ ಶೆಟ್ಟಿ, ಪದ್ಮನಾಭ ಹೆಗಡೆ, ಟ್ರಸ್ಟಿಗಳಾದ ದಯಾನಂದ ಆರ್ ಶೆಟ್ಟಿ, ಹರೀಂದ್ರ ಹೆಗ್ಡೆ, ರಮೇಶ್ ಶೆಟ್ಟಿ ಉಪಸ್ಥಿತರಿದ್ದರು.








































































































