ಬಂಟರ ಸಂಘ ಬೆಂಗಳೂರು ಇದರ ಆಶ್ರಯದಲ್ಲಿ ದೀಪಾವಳಿ ಸಂಭ್ರಮಾಚರಣೆಯ ಪ್ರಯುಕ್ತ ನಡೆದ ಅಂತರ್ ಬಂಟರ ಸಂಘಗಳ ಸಾಂಸ್ಕೃತಿಕ ನಾಟ್ಯ ಕಥಾ ರೂಪಕ ಸ್ಪರ್ಧೆಯಲ್ಲಿ ಕಾರ್ಕಳ ಬಂಟರ ಸಂಘ 75,000 ನಗದಿನೊಂದಿಗೆ ಶಾಶ್ವತ ಫಲಕದೊಂದಿಗೆ ದ್ವಿತೀಯ ಸ್ಥಾನವನ್ನು ಗಳಿಸಿದೆ. ಪ್ರಶಸ್ತಿಯನ್ನು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ ಎಂ, ಸಾಂಸ್ಕೃತಿಕ ಸಮಿತಿಯ ಚೇರ್ ಪರ್ಸನ್ ರಮೇಶ್ ಶೆಟ್ಟಿ, ಸಂಘದ ಗೌರವ ಕಾರ್ಯದರ್ಶಿ ವಿಜಯ ಜೆ ಶೆಟ್ಟಿ ಹಾಲಾಡಿ, ಉಪಾಧ್ಯಕ್ಷೆ ಕಾಂತಿ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಸಂತೋಷ್ ಶೆಟ್ಟಿ ತಲೇಕಳ ಅವರು ಪ್ರಶಸ್ತಿಯನ್ನು ವಿತರಿಸಿದರು. ಕಾರ್ಕಳ ಬಂಟರ ಸಂಘದ ಅಧ್ಯಕ್ಷ ವಿಜಯ್ ಶೆಟ್ಟಿ, ಮಹಿಳಾ ಅಧ್ಯಕ್ಷೆ ಪೂರ್ಣಿಮಾ ಹೆಗ್ಡೆ, ವಂದನಾ ರೈ ಕಾರ್ಕಳ, ಸುಹಾಸ್ ಶೆಟ್ಟಿ ಮತ್ತಿತರರು ಪ್ರಶಸ್ತಿ ಸ್ವೀಕರಿಸಿದರು.









































































































