ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ ನವೆಂಬರ್ 25 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 10 ರಿಂದ 11 ರವರೆಗೆ ಕಾರ್ಯಕಾರಿ ಸಮಿತಿ ಸಭೆ ಮತ್ತು 29ನೇ ವಾರ್ಷಿಕ ಮಹಾಸಭೆ ಜರಗಲಿದೆ. ಬೆಳಿಗ್ಗೆ ಗಂಟೆ 11 ರಿಂದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಬಹಿರಂಗ ಅಧಿವೇಶನ ಕಾರ್ಯಕ್ರಮ ನಡೆಯಲಿದೆ.

ಬಹಿರಂಗ ಅಧಿವೇಶನದಲ್ಲಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಒಕ್ಕೂಟದ ದಾನಿಗಳಾದ ಉಮಾ ಕೃಷ್ಣ ಶೆಟ್ಟಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು 2025ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಗೌರವ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಮಹಾದಾನಿ, ದಾನಿಗಳು, ಪದಾಧಿಕಾರಿಗಳು, ವಿವಿಧ ಬಂಟರ ಸಂಘಗಳ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.








































































































