ಸುರತ್ಕಲ್ ಬಂಟರ ಸಂಘದ ನಿರ್ದೇಶಕರು ಹಾಗೂ ಮಾಜಿ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಗಂಗಾಧರ್ ಶೆಟ್ಟಿ ( ಪಲ್ಲವಿ ಸುರತ್ಕಲ್ ) ಅವರು ವಿಧಿವಶರಾಗಿದ್ದಾರೆ. ಎಲ್ಲರೊಂದಿಗೆ ಸ್ನೇಹ ಸಂಬಂಧ ಹೊಂದಿದ್ದ ಗಂಗಾಧರ್ ಶೆಟ್ಟರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ್ ಪೂಂಜಾ, ಜಗನ್ನಾಥ ಶೆಟ್ಟಿ ಬಾಳ, ಸಮಾಜ ಸೇವಕ ಸತೀಶ್ ಶೆಟ್ಟಿ ಮುಂಚೂರು ಕೆಳಗಿನಮನೆ ಇವರು ತೀವ್ರ ಸಂತಾಪ ಸೂಚಿಸಿದ್ದಾರೆ.
