ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾವೇರಿ ಜಿಲ್ಲೆ ಹಾಗೂ ಹಾವೇರಿಯ ಅಂ ಬೇಡ್ಕರ್ ಭವನದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವಿಶ್ರುತ್ರಾಜ್ ಟಿ.ಬಿ ಹಾಗೂ ಪೂರ್ವಜ್ ಗೌಡ ವಿ ರಿದಮಿಕ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನಿಗಳಾಗಿ ಹೊರಹೊಮ್ಮಿರುತ್ತಾರೆ.

ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.









































































































