ಕುಂದಾಪುರ ತಾಲೂಕು ಯುವ ಬಂಟರ ಸಂಘದ ನೂತನ ಆಡಳಿತ ಕಚೇರಿ ಉದ್ಘಾಟನೆ ನವೆಂಬರ್ 15ರ ಶನಿವಾರ ಬೆಳಿಗ್ಗೆ 10:00 ಗಂಟೆಗೆ ಆರ್ ಎನ್ ಶೆಟ್ಟಿ ಸಭಾಂಗಣದ ಎರಡನೇ ಮಹಡಿಯಲ್ಲಿ ಸಂಘದ ಮಹಾಪೋಷಕರಾದ ಗಿಳಿಯಾರು ಉದಯ್ ಕುಮಾರ್ ಹೆಗ್ಡೆಯವರು ರಿಬ್ಬನ್ ಕತ್ತರಿಸುವ ಮೂಲಕ ಕಚೇರಿಯನ್ನು ಉದ್ಘಾಟನೆ ಮಾಡಿದರು. ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವ ಸಲಹೆಗಾರರು, ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರಾದ ಬಿ ಅರುಣ್ ಕುಮಾರ್ ಶೆಟ್ಟಿ ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ, ಸಂಘದ ಪೋಷಕ ಸದಸ್ಯರಾದ ಸಟ್ಟಾಡಿ ವಿಜಯ್ ಶೆಟ್ಟಿ, ಸಮತಾ ಮೋಟರ್ಸ್ ಮಾಲೀಕರಾದ ಜಡ್ಡಾಡಿ ವಿಜಯ ಶೆಟ್ಟಿ, ಪ್ರಥಮ ದರ್ಜೆಯ ಗುತ್ತಿಗೆದಾರರಾದ ಯಡಾಡಿ ಮತ್ಯಾಡಿ ಅರುಣ್ ಕುಮಾರ್ ಹೆಗ್ಡೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಪತಿ ಜಯಕರ ಶೆಟ್ಟಿ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಉಮೇಶ ಶೆಟ್ಟಿ ಕೊತ್ತಾಡಿ, ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಉತ್ತಮ್ ಕುಮಾರ್ ಶೆಟ್ಟಿ, ಸ್ಥಾಪಕಾಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ, ಮಾಜಿ ಅಧ್ಯಕ್ಷರಾದ ಸುಕೇಶ್ ಶೆಟ್ಟಿ ಹೊಸಮಠ, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಸುನಿಲ್ ಶೆಟ್ಟಿ ಹೇರಿಕುದ್ರು, ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿಧರ ಶೆಟ್ಟಿ, ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಸುಕುಮಾರ ಶೆಟ್ಟಿ ಹೇರಿಕುದ್ರು ಉಪಸ್ಥಿತರಿದ್ದರು. ಡಾ| ಚೇತನ್ ಶೆಟ್ಟಿ ಕೋವಾಡಿ ನಿರೂಪಿಸಿ, ವಂದಿಸಿದರು.











































































































