ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಪ್ರಾಂತೀಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ ನವೆಂಬರ್ 25 ರಂದು ಮಂಗಳವಾರ ಸಂಜೆ 7.00 ಗಂಟೆಗೆ ಕುಂದಾಪುರದ ಜೆ.ಸಿ ಭವನದ ಸಭಾಂಗಣದಲ್ಲಿ ನಡೆಯಿತು. ಪ್ರಾಂತೀಯ ಅಧ್ಯಕ್ಷ ರಜತ್ ಕುಮಾರ್ ಹೆಗ್ಡೆ ಮಾತನಾಡಿ, 2019 ರಲ್ಲಿ ಸ್ಥಾಪಿತಗೊಂಡ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ 317c ಜಿಲ್ಲೆಯಲ್ಲೇ ಅತ್ಯದ್ಭುತ ಕ್ಲಬ್ ಆಗಿ ಮೂಡಿ ಬಂದಿದೆ. ಇಲ್ಲಿಯ ತನಕ ಸಾರಥ್ಯ ವಹಿಸಿದ ಕ್ಲಬ್ ನ ಎಲ್ಲಾ ಅಧ್ಯಕ್ಷರಿಗೆ ನನ್ನ ಕೃತಜ್ಞತೆಗಳನ್ನು ತಿಳಿಸುತ್ತಿದ್ದೇನೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲೆಯ ಮಾಜಿ ಜಿಲ್ಲಾ ಗವರ್ನರ್ ಲಯನ್ ವಿ.ಜಿ ಶೆಟ್ಟಿ ಮಾತನಾಡಿ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಕಾರ್ಯವೈಕರಿಯನ್ನು ಪ್ರಶಂಶಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಲಯನ್ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಿದ್ದರು. ಲಯನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಲ. ಭುಜಂಗ ಶೆಟ್ಟಿ ವರದಿ ವಾಚಿಸಿದರು. ಪ್ರಾಂತೀಯ ಕಾರ್ಯದರ್ಶಿ ಲ. ಏಕನಾಥ ಬೋಳಾರ್, ವಲಯಾಧ್ಯಕ್ಷರಾದ ಲ. ವಸಂತರಾಜ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರಾಂತೀಯ ಅಧ್ಯಕ್ಷರಿಗೆ ಕ್ಲಬ್ ವತಿಯಿಂದ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ನಿಮಿತ ಪಿ ಶೆಟ್ಟಿ ಪ್ರಾರ್ಥಿಸಿ, ಕೋಶಾಧಿಕಾರಿ ಅಣ್ಣಪ್ಪ ಶೆಟ್ಟಿ ಯರುಕೋಣೆ ವಂದಿಸಿದರು. ಶ್ರೀಮತಿ ಶೈಲಜಾ ವಸಂತರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.











































































































