ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನೊಳಗೊಂಡ ಪ್ರಜಾವಾಣಿ ದಿನಪತ್ರಿಕೆಯನ್ನು ಸರಕಾರಿ ಪ್ರೌಢಶಾಲೆ ಕಾಬೆಟ್ಟು ಕಾರ್ಕಳ ಇಲ್ಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಅಂತಿಮ ಪರೀಕ್ಷೆಯವರೆಗೆ ಪ್ರತಿದಿನ ಪ್ರತಿ ವಿದ್ಯಾರ್ಥಿಗಳಿಗೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ದಿನಪತ್ರಿಕೆಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ರೋಟರಿಯ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಯ ಭಾಗವಾಗಿ ಈ ಸವಲತ್ತುಗಳನ್ನು ನೀಡುತ್ತಿದ್ದೇವೆ. ಒಳ್ಳೆಯ ಶಿಕ್ಷಣ ಪಡೆದು ಮುಂದೆ ಉತ್ತಮ ಸಮಾಜ ಸೇವೆ ಮಾಡುವ ಅವಕಾಶ ನಿಮಗೆ ಸಿಗಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಉಪನ್ಯಾಸಕರು, ಪ್ರಜಾವಾಣಿ ಪತ್ರಿಕೆಯ ವರದಿಗಾರರಾದ ಸಿದ್ದಾಪುರ ವಾಸುದೇವ ಭಟ್ ಮಾತನಾಡುತ್ತಾ, ವಿದ್ಯಾರ್ಥಿಗಳು ಮಾತನಾಡಬೇಕು, ಬರೆಯಬೇಕು, ಓದಬೇಕು ಈ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು. ರೋಟರಿ ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಇಂಟರ್ಯಾಕ್ಟ್ ಕ್ಲಬ್ಬಿನ ಅಧ್ಯಕ್ಷೆ ಸಾಕ್ಷಿ, ಸಮುದಾಯ ಸೇವೆಗಳ ಚೇರ್ಮನ್ ವಸಂತ್ ಎಂ, ಮಾಜಿ ವಲಯ ಸೇನಾನಿ ಸುರೇಶ ನಾಯಕ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮ ನಿರೂಪಿಸಿದ ಮುಖ್ಯ ಶಿಕ್ಷಕಿ ಸುಮಾಮಣಿ ಸ್ವಾಗತಿಸಿದರು. ಪತ್ರಿಕೆಯ ಪ್ರಸರಣಾಧಿಕಾರಿ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ಮಾಲಿನಿ ವಂದಿಸಿದರು.












































































































