ಪ್ರತಿಷ್ಠಿತ ಬಂಟ ಸಮಾಜದ ಕೃಷಿಕ ಮನೆತನದಲ್ಲಿ ಜನಿಸಿದ ಇನ್ನಾ ಕುರ್ಕಿಲ್ ಬೆಟ್ಟು ಸಂತೋಷ್ ಶೆಟ್ಟಿ ಅವರು ಹೋಟೆಲ್ ಉದ್ಯಮ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದವರು. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಿಗೆ ಸಹಾಯ ಹಸ್ತ ನೀಡುತ್ತಾ ಬಂದಿರುವ ಸಂತೋಷ್ ಶೆಟ್ಟರು ಪ್ರಸ್ತುತ ಪುಣೆ ಬಂಟರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭಗವಂತ ಸಂತೋಷ್ ಶೆಟ್ಟಿ ಹಾಗೂ ಕುಟುಂಬಸ್ಥರಿಗೆ ಸುಖ, ಶಾಂತಿ, ನೆಮ್ಮದಿ, ಐಶ್ವರ್ಯ, ಆರೋಗ್ಯ ಸಕಲ ಸಂಪತ್ತನ್ನು ನೀಡಿ ಹರಸಲಿ ಎಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.
ಬಂಟ್ಸ್ ನೌ ಪೇಜ್ ಲೈಕ್ ಮಾಡಿ ಪ್ರೋತ್ಸಾಹಿಸಿ ಆಶೀರ್ವದಿಸಿ