ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಜಾನಪದ ವಿದ್ವಾಂಸರಾದ ಡಾ| ಕೆ.ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ’ – ಮಾಯದ ನಡೆ ಜೋಗದ ನುಡಿ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್ಎಫ್ ರಸ್ಕಿನ್ಹ ಸಭಾಂಗಣದಲ್ಲಿ ಡಿಸೆಂಬರ್ 20 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ವಿಶ್ರಾಂತ ಕುಲಪತಿಗಳು, ಜಾನಪದ ವಿದ್ವಾಂಸರಾದ ಪ್ರೊ. ಬಿ.ಎ ವಿವೇಕ್ ರೈ ಕೃತಿ ಲೋಕಾರ್ಪಣೆಗೊಳಿಸಲಿದ್ದು, ಸಾಹಿತಿ ಡಾ| ರಾಜಶೇಖರ್ ಹಳೆಮನೆ ಕೃತಿಯ ಕುರಿತು ಅವಲೋಕನ ಮಾಡಲಿದ್ದಾರೆ. ಅಲೋಶಿಯಸ್ ಪರಿಗಣಿತ ವಿವಿಯ ಕುಲಪತಿ ಡಾ| ಪ್ರವೀಣ್ ಮಾರ್ಟಿಸ್ ಎಸ್ಜೆ, ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ.]| ನಾಗಪ್ಪ ಗೌಡ, ಲೇಖಕರು, ಜಾನಪದ ವಿದ್ವಾಂಸರಾದ ಡಾ| ಕೆ ಚಿನ್ನಪ್ಪ ಗೌಡ ಅವರು ಭಾಗವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದೈವ ನರ್ತಕರಾದ ಶೇಖರ ಪರವ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
















































































































