ತುಮಕೂರು : ತುಮಕೂರಿನ ಎಂಪ್ರೈಸ್ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ನಡೆದ ಪದವಿ ಪೂರ್ವ ಕಾಲೇಜಿನ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ-2025ರ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಪ್ರಜ್ಞಾಮೋಹನ್ ತೃತೀಯ ಸ್ಥಾನ ಪಡೆದಿರುತ್ತಾರೆ. ಈಕೆ ಹಾಸನದ ಶ್ರೀ ಮೋಹನ್ ಕುಮಾರ್ ಮತ್ತು ಶ್ರೀಮತಿ ಶೀಲಾ ದಂಪತಿಗಳ ಸುಪುತ್ರಿಯಾಗಿದ್ದಾರೆ. ಇವರಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದರೆ.

















































































































