ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ವತಿಯಿಂದ ನೀಡಲಾಗುವ 2025 ರ ಸಾಲಿನ ಪ್ರತಿಷ್ಠಿತ ಕೆಒಎ ಪ್ರಶಸ್ತಿಗೆ ಸಾಣೂರಿನ ಉದನೋನ್ಮುಖ ಬ್ಯಾಡ್ಮಿಂಟನ್ ತಾರೆ ಆಯುಷ್ ಶೆಟ್ಟಿ ಭಾಜನರಾಗಿದ್ದಾರೆ. ಡಿಸೆಂಬರ್ 21ರಂದು ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಈ ಗೌರವವನ್ನು ನೀಡಿ ಸನ್ಮಾನಿಸಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ ಶೆಟ್ಟಿಗೆ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು. ಕ್ರೀಡಾ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆಯುಷ್ ಶೆಟ್ಟಿ ಸಾಣೂರಿನ ಮಿತ್ತಲ ಮನೆಯ ರಾಮ್ ಪ್ರಕಾಶ್ ಶೆಟ್ಟಿ ಮತ್ತು ಶಾಲ್ಮಿಲಿ ದಂಪತಿ ಪುತ್ರ. ತಮ್ಮ ಎಂಟನೇ ವಯಸ್ಸಿನಲ್ಲಿ ಬ್ಯಾಡ್ಮಿಂಟನ್ ಆಡಲು ಆರಂಭಿಸಿದ್ದು, ಯುಎಸ್ ಓಪನ್ BWF SUPER 300 ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಆಯುಷ್ ಮೊದಲ ಬಿಡಬ್ಲೂಎಫ್ ಎಫ್ ಟೂರ್ ಪ್ರಶಸ್ತಿಯನ್ನು ಗೆದ್ದಿದ್ದರು. 2025 ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲೂಎಫ್ ಟೂರ್ ಪ್ರಶಸ್ತಿ ಇದಾಗಿದೆ.

















































































































