ಪುತ್ತೂರು ತಾಲೂಕು ಯುವ ಬಂಟರ ಸಂಘದ ನೇತೃತ್ವದಲ್ಲಿ ಬಂಟ ಸಮಾಜ ಬಾಂಧವರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಶ್ರೀ ಸತ್ಯನಾರಾಯಣ ಪೂಜೆ ಉತ್ತಮ ಕಾರ್ಯಯವಾಗಿದೆ ಎಂದು ಒಡಿಯೂರು ಶ್ರೀ ಗುರು ದೇವದತ್ತ ಸಂಸ್ಥಾನಮ್ ಶ್ರೀ ಮಾತಾನಂದಮಯೀ ಹೇಳಿದರು. ಅವರು ಡಿಸೆಂಬರ್ 27 ರಂದು ಪುತ್ತೂರು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಮತ್ತು ಬಂಟರ ಸಂಘ ಪುತ್ತೂರು ತಾಲೂಕು ಇದರ ಮಾರ್ಗದರ್ಶನದಲ್ಲಿ ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಯೋಗದಲ್ಲಿ ಪುತ್ತೂರು ಎಂ. ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ವೇ. ಮೂ. ಪುರೋಹಿತ ನಾಗರಾಜ ಭಟ್ ಸುಳ್ಯ ಇವರ ನೇತೃತ್ವದಲ್ಲಿ ಜರಗಿದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತಾಡಿ ಹರ್ಷಕುಮಾರ್ ರೈ ನಾಯಕತ್ವದಲ್ಲಿ ಯುವ ಬಂಟರ ವಿಭಾಗ ಉತ್ತಮ ಕೆಲಸವನ್ನು ಮಾಡಿ, ಸಮಾಜ ಭಾಂದವರ ಪ್ರೀತಿಗಳಿಸಿದೆ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವುರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನನ್ನ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿರವರು ಮಾತನಾಡಿ, ಹರ್ಷಕುಮಾರ್ ರೈ ಮಾಡಾವುರವರ ಸಾರಥ್ಯದಲ್ಲಿ ಎರಡು ವರ್ಷಗಳ ಕಾಲ ಯುವ ಬಂಟರ ಸಂಘಟನೆಯು ಅತ್ಯುತ್ತಮ ರೀತಿಯಲ್ಲಿ ಸೇವೆಯನ್ನು ಸಲ್ಲಿಸಿದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು. ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ಬಂಟರ ಸಂಘದ ಮಾಜಿ ಕಾರ್ಯದರ್ಶಿ ಮೋಹನ್ ರೈ ನರಿಮೊಗ್ರು, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರು, ಅನಿತಾ ಹೇಮನಾಥ ಶೆಟ್ಟಿ ಕಾವು, ರಂಜಿನಿ ಶೆಟ್ಟಿ ಪುತ್ತೂರು, ಯಶುಭ ರೈ, ಮೋಹನ್ ರೈ ಮಾಡಾವು, ಜಯಂತಿ ಮೋಹನ್ ರೈ ಉಪಸ್ಥಿತರಿದ್ದರು. ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ ಮತ್ತು ಅಗರ್ತಬೈಲು ಸ್ವಾತಿ ಶಶಿರಾಜ್ ರೈರವರು ಗಣಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆಯ ಸಂಕಲ್ಪವನ್ನು ನೆರವೇರಿಸಿದರು.
ಸಮಾರಂಭದಲ್ಲಿ ಬಂಟರ ಸಂಘದ ಪೂರ್ವಾಧ್ಯಕ್ಷರು, ಉಪಾಧ್ಯಕ್ಷರುಗಳು ಪದಾಧಿಕಾರಿಗಳು ಮಹಿಳಾ, ಯುವ ಬಂಟರ ವಿಭಾಗದ ಪದಾಧಿಕಾರಿಗಳು ಸೇರಿದಂತೆ 350ಕ್ಕೂ ಹೆಚ್ಚು ಮಂದಿ ಭಾಗವಹಿಸಿದರು.
ಚಿತ್ರ, ವರದಿ : ಉಮಾಪ್ರಸಾದ್ ರೈ

















































































































