ಬ್ರಹ್ಮಾವರ: ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ವಿಜ್ಞಾನ ಮಾದರಿ, ಕಲೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಪೂರ್ಣಪ್ರಜ್ಞಾ ವಿಜ್ಞಾನ ಸಂಶೋಧನಾ ಸ0ಸ್ಥೆಯ ನಿರ್ದೇಶಕರಾದ ಡಾ. ಆನಂದ ಆಗಮಿಸಿದ್ದರು. ಅವರು ವಿದ್ಯಾರ್ಥಿ ನಿರ್ಮಿತ ಮಾಯಾಜ್ವಾಲೆ ಮತ್ತು ರಾಕೆಟ್ ಉಡಾವಣೆ ಮಾಡುವ ಮೂಲಕ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ ಪೋಷಕರು ವಿಜ್ಞಾನ ವಿಷಯಕ್ಕೆ ತುಂಬಾ ಮಹತ್ವ ನೀಡುತ್ತಾರೆ, ನೀವು ಕ್ರಿಯಾತ್ಮಕ ಯೋಜನೆ, ನಿಮಗಿರುವ ಸಾಮರ್ಥ್ಯದ ಕಡೆಗೆ ಗಮನ ನೀಡಬೇಕು. ಇಂದಿನ ಯುವ ಜನಾಂಗಕ್ಕೆ ತುಂಬಾ ಅವಕಾಶಗಳು ಮತ್ತು ಸೌಲಭ್ಯಗಳಿವೆ ಅವುಗಳನ್ನು ಸೂಕ್ತವಾಗಿ ಉಪಯೋಗಿಸಿಕೊಳ್ಳಿ.

ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಿ. ಭಾರತದ ಶಕ್ತಿ ಯುವಕರು ಎಂದು ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಚಿತ್ರಕಲೆ ಮತ್ತು ವಿಜ್ಞಾನ ಮಾದರಿ ತಯಾರಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದ ಶಿಕ್ಷಕ ವೃಂದದವರಿಗೆ ಕೃತಜ್ಞತೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ವಿಜ್ಞಾನದ ಮಾದರಿಯ ತಯಾರಿಕೆ ಸಂತೋಷವನ್ನುAಟುಮಾಡುತ್ತದೆ, ನೀವು ನಿಮ್ಮಲ್ಲಿ ಅಲ್ಬರ್ಟ್ ಐನ್ಸ್ಟೀನ್ನಲ್ಲಿರುವ ಕಲ್ಪನೆ, ನ್ಯೂಟನ್ನಲ್ಲಿರುವ ಪ್ರಶ್ನಿಸುವ, ರವಿವರ್ಮನಲ್ಲಿರುವ ಚಿತ್ರಕಲೆ, ಅಬ್ದುಲ್ ಕಲಾಂನಲ್ಲಿರುವ ಕನಸು ಕಾಣುವ ಗುಣವನ್ನು ಅಳವಡಿಸಿಕೊಳ್ಳಿ ಎಂದು ತಿಳಿಸಿದರು. ವಸ್ತು ಪ್ರದರ್ಶನದಲ್ಲಿ ೬ ರಿಂದ ೧೦ ನೇ ತರಗತಿಯ ವಿದ್ಯಾರ್ಥಿಗಳ ಕಲಾಕುಂಚದಲ್ಲಿ ಅರಳಿದ ಸುಮಾರು ೨೦೦ ಕ್ಕೂ ಹೆಚ್ಚು ಚಿತ್ತ ಚಿತ್ತಾರಗಳು, ನೂತನ ವಿಜ್ಞಾನ ಮಾದರಿಗಳು, ಕರಕುಶಲ ವಸ್ತುಗಳನ್ನು ವಸ್ತು ಪ್ರದರ್ಶನದಲ್ಲಿ ಇರಿಸಲಾಗಿದ್ದು ಪೋಷಕರಿಗೆ ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ. ವಸ್ತು ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

















































































































