ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಇಲ್ಲಿ 28 ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ನೇತ್ರ ತಪಾಸಣಾ ಶಿಬಿರದಲ್ಲಿ ದೃಷ್ಟಿ ದೋಷವಿರುವ ಫಲಾನುಭವಿಗಳಿಗೆ ನೀಡಿದ ಕನ್ನಡಕಗಳು ಸದುಪಯೋಗವಾಗಲಿ, ನಿಮ್ಮ ಬಾಳಿಗೆ ಬೆಳಕನ್ನು ನೀಡಲಿ ಎಂದು ಶುಭ ಹಾರೈಸಿದರು. ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಕ್ಲಬ್ಬಿನ ಕಾರ್ಯದರ್ಶಿ ಚೇತನ್ ನಾಯಕ್, ಕ್ಷಯ ರೋಗ ಮೇಲ್ವಿಚಾರಕ ಶಿವಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರೋಟರಿ ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ಕೃಷ್ಣ ಶೆಟ್ಟಿ, ಉದಯ ಕಡಂಬ, ನಕ್ರೆ ಗ್ರಾಮ ಪಂಚಾಯತ್ ಸದಸ್ಯರು, ಆರೋಗ್ಯ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಸುನೀತಾ ಪ್ರಾರ್ಥಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಮುದಾವತಿ ಸ್ವಾಗತಿಸಿ ನಿರೂಪಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ವೈದ್ಯಾಧಿಕಾರಿ ಡಾ. ಶ್ರೀವಿದ್ಯಾ ಕಿದಿಯೂರು ವಂದಿಸಿದರು.

















































































































