ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು ನಿರಂತರ ಸೇವೆ ಮಾಡುತ್ತಾ, ಸಾಮಾಜಿಕ ಸೇವಾ ಸಂಸ್ಥೆ ಸ್ಕೌಟ್ಸ್ ಆಂಡ್ ಗೈಡ್ಸ್ ಮುಖ್ಯ ಆಯುಕ್ತಕರಾದ ಸಹಕಾರ ರತ್ನ ಬಿ. ಜಯಕರ ಶೆಟ್ಟಿ ಇಂದ್ರಾಳಿ ದಂಪತಿಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ವಿಶ್ವ ಗೀತಾ ಪರ್ಯಾಯದ ಪ್ರಯುಕ್ತ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಸಂಸ್ಥಾನದ ಮಠಾಧೀಶರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಶ್ರೀ ಮಠದ ವತಿಯಿಂದ “ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ” ಅನುಗ್ರಹಿಸಿ, ಗೌರವಿಸಿದರು.



















































































































