ಶ್ರೀ ಕ್ಷೇತ್ರ ಕಾತ್ರಾಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ಅಯ್ಯಪ್ಪ ಸ್ವಾಮಿ, ಶಿವ ದೇವರ ಹಾಗೂ ಪರಿವಾರ ದೇವರುಗಳ ವಾರ್ಷಿಕ ಉತ್ಸವ, ಮಹಾಪೂಜೆಯು ಸ್ವಸ್ತಿ ಶ್ರೀ ವಿಶ್ವಾವಸುನಾಮ ಸಂವತ್ಸರ ಧನುರ್ಮಾಸ 28, ಜನವರಿ 12 ಸೋಮವಾರದಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ರಾಘವೇಂದ್ರ ಭಟ್ ರವರ ಸಹಕಾರದೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ವಾರ್ಷಿಕೋತ್ಸವದ ಅಂಗವಾಗಿ ಜನವರಿ 11ರಂದು ರವಿವಾರದಂದು ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಸಾದ ಶುದ್ಧಿ ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶಪೂಜೆ, ವಾಸ್ತು ಬಲಿ, ದುರ್ಗಾ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಜನವರಿ 12 ಸೋಮವಾರದಂದು ಬೆಳಿಗ್ಗೆ ಮತ್ತು ಮದ್ಯಾಹ್ನದವರೆಗೆ ಮಹಾಗಣಪತಿ ಹೋಮ, ಕಲಶ ಪೂಜೆ, ನವಗ್ರಹ ಪೂಜೆ, ಅಶ್ಲೇಷಾ ಬಲಿ, ನಾಗದೇವರಿಗೆ ಅಭಿಷೇಕ, ತಂಬಿಲ, ಶ್ರೀ ದುರ್ಗಾ ದೇವಿಗೆ ಕಲಶ ಪೂಜೆ, ದುರ್ಗಾ ಪೂಜೆ, ಶಿವ ರುದ್ರಾಭಿಷೇಕ, ಶಿವಪೂಜೆ ನಡೆಯಿತು. ನಂತರ ಪಂಚಗವ್ಯಾಭಿಷೇಕ, ಪಂಚಾಮೃತಾಭಿಷೇಕ, ಕಲಶಾಭಿಷೇಕ, ವೈಭವದ ಪಲ್ಲಕ್ಕಿ ಮೆರವಣಿಗೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.





ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಸದಾನಂದ ಕೆ ಶೆಟ್ಟಿ, ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಅಧ್ಯಕ್ಷರಾದ ಅಜಿತ್ ಹೆಗ್ಡೆ ಕೆಂಜಾರು ಗುತ್ತು ಮತ್ತು ಪದಾಧಿಕಾರಿಗಳು, ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷರಾದ ಪ್ರಭಾಕರ್ ವಿ ಶೆಟ್ಟಿ ಮತ್ತು ಪದಾಧಿಕಾರಿಗಳು, ತುಳುಕೂಟದ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಕಳತ್ತೂರು ಮತ್ತು ಪದಾಧಿಕಾರಿಗಳು, ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ರೋಹಿತ್ ಶೆಟ್ಟಿ ನಗ್ರಿಗುತ್ತು ಮತ್ತು ಪದಾಧಿಕಾರಿಗಳು, ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಕಡ್ತಲ ಮತ್ತು ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರುಗಳ ಗಂಧ ಪ್ರಸಾದ ಸ್ವಿಕರಿಸಿ ಕೃತಾರ್ಥರಾದರು. ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಸುಭಾಷ್ ಎ ಶೆಟ್ಟಿ, ಸ್ಥಾಪಕಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ರಘುರಾಮ್ ಕೆ ರೈ, ಉಪಾಧ್ಯಕ್ಷ ಸುಧಾಕರ್ ಸಿ ಶೆಟ್ಟಿ, ಕೋಶಾಧಿಕಾರಿ ಸಚ್ಚಿದಾನಂದ ಎಸ್ ಶೆಟ್ಟಿ, ಜೊತೆ ಕೋಶಾಧಿಕಾರಿ ಬಾಲಕೃಷ್ಣ ಗೌಡ, ಜನ ಸಂಪರ್ಕಾಧಿಕಾರಿ ಪ್ರಶಾಂತ್ ಆಳ್ವ, ಸಲಹೆಗಾರರಾದ ಶೇಖರ್ ಟಿ ಪೂಜಾರಿ, ಜಗದೀಶ್ ಬಿ ಶೆಟ್ಟಿ, ಭಾಸ್ಕರ್ ವಿ ಶೆಟ್ಟಿ, ಗುರು ಸ್ವಾಮಿ ಭಾಸ್ಕರ ಕೊಟ್ಟಾರಿ, ಜಯ ಪೂಜಾರಿ, ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷ ಜಗದೀಪ್ ಶೆಟ್ಟಿ, ವಾರ್ಷಿಕೋತ್ಸವ ಮಹಿಳಾ ಸಮಿತಿ ಕಾರ್ಯಾಧ್ಯಕ್ಷೆ ಶ್ರೀಮತಿ ಅಂಬಿಕಾ ವಿ ಶೆಟ್ಟಿ ಹಾಗೂ ಎಲ್ಲಾ ಸಮಿತಿಗಳ ಪದಾಧಿಕಾರಿಗಳು, ಅಯ್ಯಪ್ಪ ಸ್ವಾಮಿ ಸೇವಾಕರ್ತರು, ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.
ಚಿತ್ರ, ವರದಿ : ಹರೀಶ್ ಮೂಡಬಿದ್ರಿ, ಪುಣೆ

















































































































