
ಪುತ್ತಿಗೆ ಮಠದ ಪರ್ಯಾಯ ಸಂದರ್ಭದಲ್ಲಿ ಹೊರೆ ಕಾಣಿಕೆ ಸಮಿತಿ ಸಂಚಾಲಕರಾಗಿ ಬೃಹತ್ ಪ್ರಮಾಣದಲ್ಲಿ ಸಾಮಾಗ್ರಿ ಸಂಗ್ರಹವನ್ನು ಯಶಸ್ವಿಯಾಗಿ ಮಾಡಿ, ಬಳಿಕ ಗೀತೋತ್ಸವ ಹಾಗೂ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಸಮಿತಿಯ ಸಂಚಾಲಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ನ್ಯಾಯವಾದಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಹಾಗೂ ಕ್ಷಮಾ ಸುಪ್ರಸಾದ್ ಶೆಟ್ಟಿ ದಂಪತಿಗಳಿಗೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಹಾಗೂ ಶ್ರೀ ಸುಶೀಂದ್ರತೀರ್ಥ ಸ್ವಾಮೀಜಿ ಅವರು ಶ್ರೀ ಕೃಷ್ಣಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.




















































































































