
ಭಾರತ ಸರಕಾರ ಸಾಮ್ಯದ ಇಂಡಿಯನ್ ರೋಡ್ ಕಾಂಗ್ರೆಸ್ ಇದರ ರಸ್ತೆ ವಿಪತ್ತು ನಿರ್ವಹಣಾ ಸಮಿತಿ ತಾಂತ್ರಿಕ ಸಮಿತಿಗೆ ಸದಸ್ಯರಾಗಿ ಮುಂದಿನ ಎರಡು ವರ್ಷಗಳ ಅವಧಿಗೆ ಪುತ್ತೂರು ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ಡಾ| ಹರ್ಷ ಕುಮಾರ್ ರೈ ಮಾಡಾವು ಇವರನ್ನು ಆಯ್ಕೆ ಮಾಡಲಾಗಿದೆ. ರಸ್ತೆಯ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಅನ್ವೇಷಣೆ ನಡೆಸಿ ಹೊಸ ಹೊಸ ತಾಂತ್ರಿಕ ವಿಚಾರಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅನುಷ್ಠಾನಗೊಳಿಸುವಂತೆ ಶಿಫಾರಸ್ಸು ಮಾಡುವ ಏಕೈಕ ಸ್ವತಂತ್ರ ಸಂಸ್ಥೆ ಇಂಡಿಯನ್ ರೋಡ್ ಕಾಂಗ್ರೆಸ್ ಇದೀಗ ರಸ್ತೆಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳು, ನೆರೆ, ಭೂಕುಸಿತ, ಭೂಕಂಪ, ಅಪಘಾತಗಳು ಇತ್ಯಾದಿಗಳನ್ನು ತಡೆಗಟ್ಟುವ ಬಗ್ಗೆ ಯೋಜನೆಗಳನ್ನು ರೂಪಿಸಿ ವಿನೂತನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಮತ್ತು ಹೊಸ ಮಾರ್ಗಸೂಚಿ ನಿಯಮಾವಳಿಗಳನ್ನು ಜಾರಿಗೆ ತರಲು ಈ ಸಮಿತಿಯನ್ನು ರಚಿಸಲಾಗಿರುತ್ತದೆ.





















































































































