
ಬ್ರಹ್ಮಾವರ: ಜಿ ಎಮ್ ವಿದ್ಯಾನಿಕೇತನ್ ಹಾಗೂ ಜಿ ಎಮ್ ಗ್ಲೋಬಲ್ ಸ್ಕೂಲ್ ಜಂಟಿಯಾಗಿ ೭೭ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ, ಶಿಸ್ತು ಹಾಗೂ ರಾಷ್ಟ್ರಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪ್ರೊ. ಸುರೇಂದ್ರನಾಥ ಶೆಟ್ಟಿ, ನಿವೃತ್ತ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ ಎಂ.ಜಿ.ಎo ಕಾಲೇಜು, ಉಡುಪಿ ಇವರು ಆಗಮಿಸಿ ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಲ್ಲಿ ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು ಎನ್ನುವ ಹೆಮ್ಮೆಯೊಂದಿಗೆ ನಮ್ಮ ದೇಶದ ಶ್ರೇಷ್ಟ ಸಂಸ್ಕೃತಿ, ಹಿರಿಮೆ-ಗರಿಮೆ, ಏಕತೆ, ಶ್ರೇಷ್ಟ ಮೌಲ್ಯಗಳನ್ನು ಜವಾಬ್ದಾರಿಯುತ ಪ್ರಜೆಗಳಾದ ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಂಡು ಸ್ವಾವಲಂಬಿಗಳಾಗಿ ಜೀವನವನ್ನು ನಡೆಸಬೇಕೆಂದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ದೇಶದ ಪ್ರಜೆಗಳಾದ ನಾವು ಮೂಲಭೂತ ಜವಾಬ್ದಾರಿಗಳನ್ನು ಅರಿತುಕೊಂಡು ದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದರು. ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲೆಯಾದ ದೀಪ್ತಿ ಶೆಟ್ಟಿಯವರು ಗಣರಾಜ್ಯೋತ್ಸವದ ಶುಭ ಹಾರೈಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದರು. ಜಿ ಎಮ್ ವಿದ್ಯಾನಿಕೇತನ ಹಾಗೂ ಜಿ ಎಮ್ ಗ್ಲೋಬಲ್ ಸ್ಕೂಲ್ನ ವಿದ್ಯಾರ್ಥಿಗಳಿಂದ ನೃತ್ಯ, ಸಂಗೀತ, ಯಕ್ಷಗಾನ ಹಾಗೂ ‘ಪೂರ್ಣ ಸ್ವರಾಜ್ಯ’ ಎಂಬ ಕಿರುನಾಟಕದ ಮೂಲಕ ರಾಷ್ಟçಪ್ರೇಮದ ಸಂದೇಶದೊoದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ಥಕವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಜಿ ಎಮ್ ಗ್ಲೋಬಲ್ ಸ್ಕೂಲ್ನ ಆಡಳಿತ ನಿರ್ದೇಶಕರಾದ ಪ್ರಣವ್ ಶೆಟ್ಟಿ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನೂಷಾ ಸುಬ್ರಹ್ಮಣ್ಯಂ, ಉಪಾಧ್ಯಕ್ಷೆ ರೇವತಿ ಕೆ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ ಮತ್ತು ಜಿ ಎಮ್ ಸಮೂಹ ವಿದ್ಯಾಸಂಸ್ಥೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವು ಶಾಂತಿ, ಏಕತೆ, ದೇಶಪ್ರೇಮದ ಸಂದೇಶದೊAದಿಗೆ ಯಶಸ್ವಿಯಾಗಿ ಸಂಪನ್ನವಾಯಿತು.



















































































































