
ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ 14ನೇ ವಾರ್ಷಿಕ ಸಮಾವೇಷವನ್ನು ಫೆಬ್ರವರಿ 6 ರಂದು ಮಧ್ಯಾಹ್ನ 2:30 ಗಂಟೆಯಿಂದ ಪುಣೆಯ ಬಾನೇರ್ ನಲ್ಲಿರುವ ಬಂಟರ ಭವನದಲ್ಲಿ ಆಯೋಜಿಸಲಾಗಿದೆ. ಅಧ್ಯಕ್ಷರಾದ ರೋಹಿತ್ ಡಿ ಶೆಟ್ಟಿ ನಗ್ರಿಗುತ್ತು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿಎ ಅಶೋಕ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ಬಂಟ್ವಾಳ ಬಂಟರ ಸಂಘ ಹಾಗೂ ಮುಲುಂಡ್ ಬಂಟರ ಸಂಘದ ಮಾಜಿ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಹಾಗೂ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆ ಅವರು ಗೌರವಾನ್ವಿತ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಸಂಘದ ಉಪಾಧ್ಯಕ್ಷರಾಗಿ ಡಾ. ಸುಧಾಕರ ಶೆಟ್ಟಿ ಹಾಗೂ ಸತೀಶ್ ರೈ ಕಲ್ಲಂಗಲ ಗುತ್ತು, ಗೌರವ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ, ಗೌರವ ಖಜಾಂಚಿಯಾಗಿ ಸಿಎ ಮನೋಹರ ಶೆಟ್ಟಿ, ಪಿ.ಆರ್.ಓ ಆಗಿ ಪ್ರದೀಪ್ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ರೇಷ್ಮಾ ಆರ್ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀಮತಿ ಶರ್ಮಿಳಾ ರೈ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹಾಗೂ ಯುವ ಘಟಕದ ಅಧ್ಯಕ್ಷರಾಗಿ ಆದೀಪ್ ಶೆಟ್ಟಿಯವರು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮದ್ಯಾಹ್ನ 2:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6 ಗಂಟೆಗೆ ಅಧಿಕೃತ ವಾರ್ಷಿಕ ಸಮಾರಂಭಕ್ಕೆ ಚಾಲನೆ ದೊರೆಯಲಿದೆ. ಸಮಾವೇಶದ ವಿಶೇಷ ಆಕರ್ಷಣೆಯಾಗಿ ಶ್ರೀ ಶಕ್ತಿ ಸಾಂಸ್ಕೃತಿಕ ತಂಡದ ಆಶ್ರಯದಲ್ಲಿ ‘ಸಾಮರ್ಥ್ಯ ಕಲಾವೈಭವ’ ಎಂಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಕ್ತಿ, ಶಕ್ತಿ ಹಾಗೂ ಸಂಸ್ಕೃತಿಯ ಸೊಗಡನ್ನು ಒಳಗೊಂಡ ಈ ಕಾರ್ಯಕ್ರಮವು ಪ್ರೇಕ್ಷಕರಿಗೆ ಮನಮುಗ್ಧಗೊಳಿಸುವ ಅನುಭವ ನೀಡಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಈ ಸಮಾವೇಶಕ್ಕೆ ಬಂಟ ಸಮುದಾಯದ ಸದಸ್ಯರು ಹಾಗೂ ಸಾರ್ವಜನಿಕರು ಕುಟುಂಬ ಸಮೇತರಾಗಿ ಭಾಗವಹಿಸಲು ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಈ 14ನೇ ವಾರ್ಷಿಕ ಸಮಾವೇಶವು ಸಂಘಟನೆಯ ಚಟುವಟಿಕೆಗಳಿಗೆ ಹೊಸ ದಿಕ್ಕು ನೀಡುವುದರೊಂದಿಗೆ ಸಾಂಸ್ಕೃತಿಕ ಏಕತೆಯ ವೇದಿಕೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.



















































































































