
ಕನ್ನಡ ರಿಯಾಲಿಟಿ ಕಾರ್ಯಕ್ರಮ ಬಿಗ್ ಬಾಸ್ ನ ರನ್ನರ್ ಅಪ್ ಆಗಿರುವ ಪಡುಬಿದ್ರಿಯ ರಕ್ಷಿತಾ ಶೆಟ್ಟಿ ಅವರಿಗೆ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಸನ್ಮಾನ ಸಮಾರಂಭವು ಸಂಘದ ಸಭಾಭವನದಲ್ಲಿ ಜರಗಿತು. ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಡಾ. ವೈ ಎನ್ ಶೆಟ್ಟಿ ಅಭಿನಂದನಾ ಭಾಷಣಗೈದರು.

ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿನ ತನ್ನ ನೆನಪುಗಳನ್ನು ಮೆಲುಕು ಹಾಕಿ, ಪದ್ಯವನ್ನೂ ಹಾಡಿ ಜನರನ್ನು ರಂಜಿಸಿದರು. ಈ ಸಂದರ್ಭ ಪಡುಬಿದ್ರಿ ಬಂಟರ ಸಂಘದ ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪಲ್ಲವಿ, ಸಿರಿಮುಡಿ ದತ್ತಿನಿಧಿಯ ಅಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ, ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಯುವ ಬಂಟರ ಸಂಘದ ಅಧ್ಯಕ್ಷ ಸುಜಿತ್ ಶೆಟ್ಟಿ, ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಶಾಲಿನಿ ಶೆಟ್ಟಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಮಾಜಿ ಅಧ್ಯಕ್ಷ ಎರ್ಮಾಳು ಶಶಿಧರ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರುಗಳಾದ ರವೀಂದ್ರನಾಥ ಜಿ. ಹೆಗ್ಡೆ, ಸುರೇಶ್ ಶೆಟ್ಟಿ, ಕಾಪು ಬಂಟರ ಸಂಘದ ಮಹಿಳಾ ಘಟಕಾಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ, ರಕ್ಷಿತಾ ಅವರ ತಂದೆ ರವಿ ಶೆಟ್ಟಿ, ತಾಯಿ ಹರಿಣಿ ಶೆಟ್ಟಿ, ಅಜ್ಜಿ ರತ್ನಾ ಶೆಟ್ಟಿ, ಸಹೋದರಿ ಅಕ್ಷತಾ ಶೆಟ್ಟಿ ಉಪಸ್ಥಿತರಿದ್ದರು.
ಸತೀಶ್ ಶೆಟ್ಟಿ ಗುಡ್ಡೆಚ್ಚಿ ಮತ್ತು ವಿಧಿಶಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ವಂದಿಸಿದರು.





















































































































