
ಸುರತ್ಕಲ್ ನ ಸುಭಾಷಿತನಗರ ಅಸೋಸಿಯೇಷನ್ ಕಛೇರಿಯಲ್ಲಿ ನಾಗರೀಕ ಸುರಕ್ಷತೆಯ ಪಾಲನೆ, ಸೈಬರ್ ಕ್ರೈಮ್ ಹಾಗೂ ಮಾದಕ ವಸ್ತು ನಿಷೇದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಸುರತ್ಕಲ್ ಆರಕ್ಷಕ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ರಘು ನಾಯ್ಕ್ ಹಾಗೂ ಇಲಾಖಾ ಸಿಬ್ಬಂದಿಗಳ ಸಹಯೋಗದೊಂದಿಗೆ ಮಾದಕ ದ್ರವ್ಯ, ಸೈಬರ್ ಕ್ರೈಮ್ ಅಪರಾಧ ತಡೆಗಳ ಬಗ್ಗೆ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಶಿಬಿರ ಹಾಗೂ ಪೊಲೀಸ್ ಇಲಾಖೆಯಿಂದ ಮನೆ ಮನೆ ಸಂಪರ್ಕ ಕಾರ್ಯಕ್ರಮದ ವಿವರವನ್ನು ಇಲಾಖಾ ವತಿಯಿಂದ ನೀಡಲಾಯಿತು ಹಾಗೂ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರ ಮಾಹಿತಿಯನ್ನು ನೀಡಲಾಯಿತು.

ಯಾವುದೇ ಸೈಬರ್ ಅಪರಾಧ ವಂಚನೆಗೆ ಒಳಗಾದಲ್ಲಿ ದೂರವಾಣಿ ಸಂಖ್ಯೆ1930 ಮತ್ತು 112ಕ್ಕೆ ಕರೆ ಮಾಡಿ ಸಮಸ್ಯೆ ಪರಿಹರಿಸಲು ಸೂಚಿಸಿದರು. ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಏರ್ಪಡಿಸಲಾದ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಾರ್ವಜನಿಕರು ಭಾಗವಹಿಸಿದರು. ಅಸೋಸಿಯೇಷನ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಮುಖ್ಯ ಅತಿಥಿಗಳಾಗಿ ಬಂಟರ ಸಂಘ (ರಿ) ಸುರತ್ಕಲ್ ಇದರ ನಿಕಟಪೂರ್ವ ಅಧ್ಯಕ್ಷರಾದ ಲೋಕಯ್ಯ ಶೆಟ್ಟಿ ಮುಂಚೂರು ಭಾಗವಹಿಸಿದ್ದರು. ಅಸೋಸಿಯೇಶನ್ ನ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು ವಂದಿಸಿದರು.





















































































































