
ಬಂಟರ ಯಾನೆ ನಾಡವರ ಮಾತೃ ಸಂಘದ ನಿಕಟಪೂರ್ವ ಗೌರವ ಪ್ರಧಾನ ಕಾರ್ಯದರ್ಶಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಅವರ ಕಛೇರಿಯಲ್ಲಿ ಸನ್ಮಾನಿಸಲಾಯಿತು. ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಅಧ್ಯಕ್ಷರಾದ ಗೋಪಾಲಕೃಷ್ಣ ಶಾಸ್ತ್ರಿ ಮತ್ತು ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ರಘ ಇಡ್ಕಿದು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.






















































































































