
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಐತಿಹಾಸಿಕ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ಉದ್ಯಮಿ ಉದಯ ಕುಮಾರ್ ಶೆಟ್ಟಿ ಮುನಿಯಾಲು ಇವರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಸಾಗರದ ಶ್ರೀ ಮಾರಿಕಾಂಭಾ ದೇವಳದಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ 9 ದಿನಗಳ ಪರ್ಯಂತ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯುವ ಸಂಪ್ರದಾಯವಿದ್ದು, ಇದು ಕರ್ನಾಟಕದ ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಲಕ್ಷಾಂತರ ಭಕ್ತರು 9 ದಿನಗಳ ಪರ್ಯಂತ ದೇವಿಯ ದರ್ಶನವನ್ನು ಪಡೆಯುತ್ತಾರೆ. ಈ ಪವಿತ್ರವಾದ ಜಾತ್ರಾ ಮಹೋತ್ಸವದ 8 ನೇ ದಿನದಂದು ಶ್ರೀ ಮಾರಿಕಾಂಬಾ ತಾಯಿಯ ದರ್ಶನವನ್ನು ಪಡೆದರು.



ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಶೆಟ್ಟಿ ಹಕ್ಲಾಡಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಪ್ರಸನ್ನ ಶೆಟ್ಟಿ, ಮಂಜುನಾಥ ಸಾಗರ ಮತ್ತಿತರರು ಉಪಸ್ಥಿತರಿದ್ದರು.






















































































































