
ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಐದನೇ ಬಾರಿಗೆ ಎಸ್ ತೋಯಜಾಕ್ಷ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಎರಡನೇ ಬಾರಿಗೆ ತನಿಯಪ್ಪ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ಸಂದರ್ಭ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ಚುನಾವಣೆ ನಡೆಯದೆ ಅವಿರೋಧ ಆಯ್ಕೆ ನಡೆಯಿತು. ರಿಟರ್ನಿಂಗ್ ಅಧಿಕಾರಿ ಬಿ. ನಾಗೇಂದ್ರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪುಷ್ಪಾ ಡಿ ಸಹಕರಿಸಿದರು.



























































































































