
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದ.ಕ ಜಿಲ್ಲಾ ಶಾಖೆಯ ಮುಂದಿನ 3 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ಸಿ.ಎ ಶಾಂತರಾಮ್ ಶೆಟ್ಟಿ ನೇತೃತ್ವದ ತಂಡ ಎಲ್ಲಾ 10 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ದಾಖಲಿಸಿದೆ. ಚುನಾವಣಾಧಿಕಾರಿಯಾಗಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಮಹೇಶ್ ಕುಮಾರ್ ಯು ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ನಿವೃತ್ತ ಚುನಾವಣಾ ಉಪ ತಹಶೀಲ್ದಾರ್ ರಾಮಚಂದ್ರ ಬಿ ಕಾರ್ಯನಿರ್ವಹಿಸಿದ್ದರು.




























































































































