
ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿ ಉಡುಪಿ ವತಿಯಿಂದ ನಡೆಯುವ “ಉಡುಪಿ ಕಂಬಳ” ಇದರ ಶಂಕುಸ್ಥಾಪನೆ ಹಾಗೂ ಪೋಸ್ಟರ್ ಅನಾವರಣ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ವಹಿಸಿದ್ದರು.


ಈ ಸಂದರ್ಭದಲ್ಲಿ ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ರಾಜ್ಯ ಕಂಬಳ ಆಸೋಸಿಯೇಶನ್ ಅಧ್ಯಕ್ಷರಾದ ಐಕಳಬಾವ ಡಾ| ದೇವಿಪ್ರಸಾದ್ ಶೆಟ್ಟಿ, ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ಸದಸ್ಯರಾದ ನಂದಳಿಕೆ ಶ್ರೀಕಾಂತ್ ಭಟ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಮುಖಂಡರಾದ ಹರಿಕೃಷ್ಣ ಬಂಟ್ವಾಳ, ರಾಜ್ಯ ಕಂಬಳ ಆಸೋಸಿಯೇಶನ್ ಕಾರ್ಯದರ್ಶಿಗಳಾದ ವಿಜಯ್ ಕುಮಾರ್ ಕಂಗಿನಮನೆ, ಕೋಶಾಧಿಕಾರಿಗಳಾದ ಲೋಕೇಶ್ ಶೆಟ್ಟಿ ಮುಚ್ಚೂರು ಹಾಗೂ ಕಂಬಳ ಅಭಿಮಾನಿಗಳು ಉಪಸ್ಥಿತರಿದ್ದರು.

























































































































