
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇದರ ಮಾರ್ಗದರ್ಶನದೊಂದಿಗೆ ಮಹಿಳಾ ಬಂಟರ ವಿಭಾಗ, ಬಂಟರ ಸಂಘ ಪುತ್ತೂರು ತಾಲೂಕು ಇದರ ಸಾರಥ್ಯದಲ್ಲಿ ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಮಾರ್ಚ್ 22 ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿರುವ “ಐಸಿರಿ – 2026” ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಾರ್ಚ್ 2 ರಂದು ಜರಗಿತು.





ಪ್ರಾರಂಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರು, ನಿಕಟ ಪೂರ್ವ ಅಧ್ಯಕ್ಷೆ ಸಬಿತಾ ಭಂಡಾರಿ, ಪ್ರಧಾನ ಕಾರ್ಯದರ್ಶಿ ಕುಸುಮಾ ಪಿ. ಶೆಟ್ಟಿ ಕೆರೆಕ್ಕೋಡಿ ಮತ್ತು ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಪುತ್ತೂರು ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ಮಾಜಿ ಕಾರ್ಯದರ್ಶಿ ಮೋಹನ್ ರೈ ನರಿಮೊಗರು, ನಿರ್ದೇಶಕರಾದ ರವಿಪ್ರಸಾದ್ ಶೆಟ್ಟಿ ಬನ್ನೂರು, ಶಶಿರಾಜ್ ರೈ ಮುಂಡಾಳಗುತ್ತು, ನಿವೃತ್ತ ಸೈನಿಕ ದೇರ್ಲ ಅಮ್ಮಣ್ಣ ರೈ ಪಾಪೆಮಜಲು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮನ್ಮಥ ಶೆಟ್ಟಿ, ಯುವ ಬಂಟರ ವಿಭಾಗದ ರಾಜ್ ದೀಪಕ್ ಶೆಟ್ಟಿ ಮಠ – ಸವಣೂರು, ಆನಂದ ರೈ ಡಿಂಬ್ರಿ ಉಪಸ್ಥಿತರಿದ್ದರು.

























































































































