
ಶ್ರೀ ನಡಿಯೇಲು ದೈಯ್ಯಂಗುಲು, ಶ್ರೀ ಉಳ್ಳಾಲ್ತಿ, ಶ್ರೀ ನಾಲ್ಕೈತ್ತಾಯ ಹಾಗೂ ಪರಿವಾರ ದೈವಗಳ ಪಾವನ ಕ್ಷೇತ್ರ ಮಿತ್ತಮಜಲು, ಸಜೀಪ ಮಾಗಣೆಯಲ್ಲಿ ಮಾರ್ಚ್ 18, 19 ಮತ್ತು 20 ರಂದು ಮೂರು ದಿನಗಳ ಕಾಲ ನಡೆಯಲಿರುವ ಶ್ರೀ ನಡಿಯೇಲು ದೈಯ್ಯಂಗುಲುಗಳ ನೂತನ ಸ್ವರ್ಣಬಿಂಬಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪೂರ್ವಭಾವಿ ಸಿದ್ಧತಾ ಸಭೆ ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ ವಿದ್ಯಾನಗರ, ಸಜಿಪ ಮುನ್ನೂರಿನಲ್ಲಿ ನಡೆಯಿತು. ಸಭೆಯನ್ನು ರತ್ನಾಕರ ಪೂಜಾರಿ ನಾಡಾರು ಇವರು ನಿರ್ವಹಿಸಿದರು. ಮಾಗಣೆಯ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್ ಅವರು ಕ್ಷೇತ್ರದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಹೊರಕಾಣಿಕೆ ಸಮರ್ಪಣ ಸಮಿತಿಯ ಮುಖ್ಯ ಸಂಚಾಲಕರಾದ ಜಯಶಂಕರ್ ಬಾಸ್ರಿತ್ತಾಯ ಅವರು ಹೊರೆಕಾಣಿಕೆ ಸಮರ್ಪಣೆ ಕುರಿತು ಮಾಹಿತಿ ನೀಡಿದರು.

ಸಮಿತಿಯ ಗೌರವಾಧ್ಯಕ್ಷರಾದ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರು ಶ್ರೀ ನಡಿಯೇಲು ದೈಯ್ಯಂಗುಲುಗಳ ನೂತನ ಸ್ವರ್ಣಬಿಂಬಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಸಂಪೂರ್ಣ ವಿವರವನ್ನು ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾಂಕೇತಿಕವಾಗಿ ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ ವಿದ್ಯಾನಗರ, ಸಜಿಪ ಮುನ್ನೂರು ಇದರ ಪದಾಧಿಕಾರಿಗಳು ಹಾಗೂ ಗೌರವಾನ್ವಿತ ಸದಸ್ಯರಿಗೆ ವಿತರಿಸಲಾಯಿತು. ಸಭೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ, ಹೊರೆಕಾಣಿಕೆ ಸಮರ್ಪಣೆ ಹಾಗೂ ಉತ್ಸವದ ಸಿದ್ಧತೆಗಳ ಕುರಿತು ಚರ್ಚೆ ನಡೆಯಿತು. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರ ಅತ್ಯಗತ್ಯವೆಂದು ಸಭೆಯಲ್ಲಿ ತಿಳಿಸಲಾಯಿತು. ವಿವಿಧ ಜವಾಬ್ದಾರಿಗಳ ಹಂಚಿಕೆ, ವ್ಯವಸ್ಥೆಗಳ ಯೋಜನೆ ಹಾಗೂ ಭಕ್ತರ ಭಾಗವಹಿಸುವಿಕೆ ಕುರಿತು ವಿಚಾರ ವಿನಿಮಯವೂ ನಡೆಯಿತು.
ಸಭೆಯಲ್ಲಿ ಮಾಗಣೆಯ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್, ಶ್ರೀ ಕ್ಷೇತ್ರದ ಜೀರ್ಣೋದ್ದಾರ ಹಾಗೂ ನೂತನ ಸ್ವರ್ಣಬಿಂಬ ಪ್ರತಿಷ್ಠಾ ಸಮಿತಿಯ ಗೌರವಾಧ್ಯಕ್ಷರಾದ ನಗ್ರಿಗುತ್ತು ವಿವೇಕ್ ಶೆಟ್ಟಿ, ಕೋಶಾಧಿಕಾರಿ ದೇವಿಪ್ರಸಾದ್ ಪೂಂಜ ಬರಂಗರೆ, ಜೊತೆ ಕಾರ್ಯದರ್ಶಿ ರತ್ನಾಕರ ಪೂಜಾರಿ ನಾಡಾರು ಹಾಗೂ ಹೊರಕಾಣಿಕೆ ಸಮರ್ಪಣ ಸಮಿತಿಯ ಮುಖ್ಯ ಸಂಚಾಲಕರಾದ ಜಯಶಂಕರ್ ಬಾಸ್ರಿತ್ತಾಯ ಉಪಸ್ಥಿತರಿದ್ದರು. ಇದರೊಂದಿಗೆ ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ ವಿದ್ಯಾನಗರ, ಸಜಿಪ ಮುನ್ನೂರು ಇದರ ಪದಾಧಿಕಾರಿಗಳು ಹಾಗೂ ಗೌರವಾನ್ವಿತ ಸದಸ್ಯರು ಮತ್ತು ಪರಿಸರದ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.


























































































































