
ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಹುಬ್ಬಳ್ಳಿಯ ಉದ್ಯಮಿ, ಸಮಾಜಸೇವಕ ಸಂತೋಷ್ ಆರ್ ಶೆಟ್ಟಿಯವರು ಪ್ರತಿಷ್ಠಿತ ‘ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026’ ಸ್ವೀಕರಿಸಿದರು. ಗಳಿಸಿದ ಹಣದಲ್ಲಿ ಸ್ವಲ್ಪ ಪ್ರಮಾಣವನ್ನು ಸಮಾಜ ಸೇವೆಗೆ ಮೀಸಲಿಡಬೇಕೆಂಬ ಸಿದ್ಧಾಂತವನ್ನು ಪಾಲಿಸಿಕೊಂಡು ಬಂದಿರುವ ಇವರು ಹುಬ್ಬಳ್ಳಿಯನ್ನು ಕರ್ಮ ಭೂಮಿಯಾಗಿಸಿಕೊಂಡರು. ಸಂತೋಷ ಶೆಟ್ಟಿಯವರು ಕೊಡುಗೈ ದಾನಿ, ಯುವಕರ ಆಶಾಕಿರಣವಾಗಿ ಗುರುತಿಸಿಕೊಂಡಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಇವರಿಂದ ಸಹಾಯ ಸಹಕಾರ ಪಡೆದು ಸಾವಿರಾರು ಜನರು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದಾರೆ. ಇವರಲ್ಲಿನ ಶ್ರದ್ಧೆ ಹಾಗೂ ಕಠಿಣ ಪರಿಶ್ರಮವೇ ಯಶಸ್ಸಿಗೆ ಕಾರಣವಾಗಿದ್ದು, ಇವರು ಹುಬ್ಬಳ್ಳಿಯ ಪ್ರತಿಷ್ಠಿತ ಬಡಾವಣೆ ಡಾಲರ್ಸ್ ಕಾಲೋನಿ ನಿವಾಸಿಗಳ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.


























































































































