
ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರು ಐಕಳ ಹರೀಶ್ ಶೆಟ್ಟಿಯವರನ್ನು ದೇವರ ಪ್ರಸಾದ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ, ಕ್ಷೇತ್ರದ ಆಡಳಿತ ಮೊಕ್ತೇಸರರಾದ ಮಂಜುನಾಥ್ ಭಂಡಾರಿ ಶೆಡ್ಡೆ, ಸಂತೋಷ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಮತ್ತು ಇನ್ನಿತರರು ಉಪಸ್ಥಿತರಿದ್ದರು.


























































































































