
ಅದಾನಿ ಗ್ರೂಪ್ ಕರ್ನಾಟಕದ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಅಧ್ಯಕ್ಷರಾದ ಕಿಶೋರ್ ಆಳ್ವ ಅವರು ದಿ ಅಸೋಸಿಯೇಟೆಡ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ASSOCHAM INDIA) ಸಂಸ್ಥೆಯ 2026 -27ರ ಸಾಲಿಗೆ ಕರ್ನಾಟಕ ರಾಜ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕಿಶೋರ್ ಆಳ್ವ ಅವರು ಸಮಾಜಸೇವಕರಾಗಿ ಗುರುತಿಸಿಕೊಂಡಿದ್ದು, ಬಹು ರಾಷ್ಟ್ರೀಯ ಕಂಪನಿಗಳು, ಇಂಧನ ಮೂಲಸೌಕರ್ಯ ಮತ್ತು ಅಂತರಾಷ್ಟ್ರೀಯ ವ್ಯಾಪಾರ ಸಂಬಂಧಗಳು ಸಹಿತ ವಿವಿಧ ಕ್ಷೇತ್ರಗಳಲ್ಲಿ ಮೂರು ದಶಕಗಳಿಗಿಂತಲೂ ಹೆಚ್ಚು ಅನುಭವ ಹೊಂದಿದ್ದಾರೆ.



























































































































