
ತೃತೀಯ ವರ್ಷದ ಮೂಳೂರು ಅಡ್ಡೂರು ಜೋಡುಕರೆ ಗುರುಪುರ ಕಂಬಳಕ್ಕೆ ಶುಭ ಮುಹೂರ್ತ ನಿಗದಿಯಾಗಿದ್ದು ಕೆಸರಿನ ಗಮ್ಮತ್ತಿಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 4 ರಂದು ಕಂಬಳೋತ್ಸವ ಭರ್ಜರಿಯಾಗಿ ನಡೆಯಲಿದ್ದು, ಅದರ ಆಹ್ವಾನ ಪತ್ರಿಕೆಯನ್ನು ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಡುಗಡೆ ಮಾಡಿದೆ. ಈ ಸಂದರ್ಭದಲ್ಲಿ ಗುರುಪುರ ಕಂಬಳದ ರೂವಾರಿ ಇನಾಯತ್ ಆಲಿ, ಕಂಬಳ ಸಮಿತಿಯ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್, ಸ್ಥಾಪಕಾಧ್ಯಕ್ಷ ರಾಜ್ ಕುಮಾರ್ ಶೆಟ್ಟಿ, ಕಾರ್ಯಾಧ್ಯಕ್ಷ ಜಗದೀಶ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯಶವಂತ್ ಕುಮಾರ್ ಶೆಟ್ಟಿ, ವಿನಯ್ ಕುಮಾರ್ ಶೆಟ್ಟಿ, ಗಿರೀಶ್ ಆಳ್ವ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.




























































































































