
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪಿ.ಬಿ ಹರೀಶ್ ರೈಯವರ ಅಧ್ಯಕ್ಷತೆಯಲ್ಲಿ ಗೌರವಿಸಿದರು. ಹಿರಿಯ ಪತ್ರಕರ್ತ ಕೆ ಆನಂದ ಶೆಟ್ಟಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಬಿ.ಎನ್., ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿಯವರು ಉಪಸ್ಥಿತರಿದ್ದರು.



























































































































